ಮಾಸ್ತಿಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ಚಿಣ್ಣರೊಂದಿಗೆ ಜ್ಞಾನ ಸಂಭ್ರಮ – “ಮಕ್ಕಳ ಪ್ರತಿಭೆ ಬೆಳಗಿಸಲು ಪೋಷಕರ ಪ್ರೋತ್ಸಾಹ ಅಗತ್ಯ” : ಶೈಲಜಾ

ಬೆಳ್ಳಾರೆ: ಮಕ್ಕಳೇ ದೇಶದ ಭವಿಷ್ಯವಾಗಿದ್ದು, ಅವರಲ್ಲಿರುವ ಪ್ರತಿಭೆ,ಸೃಜನಶೀಲತೆ ಹಾಗೂ ಉತ್ತಮ ಮೌಲ್ಯಗಳನ್ನು ಬೆಳೆಸುವಲ್ಲಿ ಪೋಷಕರ ಪಾತ್ರ ಮಹತ್ವದ್ದಾಗಿದೆ ಎಂದು ಸುಳ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಯೋಜನಾಧಿಕಾರಿ ಶೈಲಜಾ ಬಿ ಹೇಳಿದರು. ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇಲಾಖೆ, ಸುಳ್ಯ, ಮಾಸ್ತಿಕಟ್ಟೆ ತಡಗಜೆ ಅಂಗನವಾಡಿ ಕೇಂದ್ರ, ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಹಾಗೂ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆ, ಬೆಳ್ಳಾರೆ ಇವರ ಸಂಯುಕ್ತ ಆಶ್ರಯದಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ನಡೆದ ಚಿಣ್ಣರೊಂದಿಗೆ ಜ್ಞಾನ ಸಂಭ್ರಮ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. .

. . . . . . . . .

ಕಾರ್ಯಕ್ರಮವನ್ನು ಅಂಗನವಾಡಿಯ ಪುಟಾಣಿ ಮಕ್ಕಳು ದೀಪ ಬೆಳಗಿಸಿ ಉದ್ಘಾಟಿಸಿದರು. ಬಾಲವಿಕಾಸ ಸಮಿತಿ ಅಧ್ಯಕ್ಷೆ ಶೈನಿ ಕಿರಣ್ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಅಧ್ಯಕ್ಷ ಆರೀಫ್ ಬಿ.ಎಂ., ಕಾರ್ಯದರ್ಶಿ ಪ್ರಶಾಂತ್ ಟಿ ಎಂ, ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಉಪಸ್ಥಿತರಿದ್ದರು. ಉಪನ್ಯಾಸಕ ಯೋಗೀಶ್ ತಳೂರು ಸ್ವಾಗತಿಸಿ, ಅಂಗನವಾಡಿ ಶಿಕ್ಷಕಿ ಇಂದಿರಾ ವಂದಿಸಿದರು. ಉಪನ್ಯಾಸಕಿ ರಶ್ಮಿ ಶೇಣಿ ಕಾರ್ಯಕ್ರಮ ನಿರ್ವಹಿಸಿದರು. ಅಂಗನವಾಡಿ ಶಿಕ್ಷಕಿ ಇಂದಿರಾ ಮತ್ತು ಸಹಾಯಕಿ ಗುಲಾಬಿ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. 

. . . . . . .

ಮಕ್ಕಳ ದಿನಾಚರಣೆಯ ಅಂಗವಾಗಿ ಅಂಗನವಾಡಿ ಮಕ್ಕಳಿಗೆ ವೇಷಭೂಷಣ ಸ್ಪರ್ಧೆ ನಡೆಸಿ ಬಹುಮಾನ ವಿತರಿಸಲಾಯಿತು. ಸಭಾ ಕಾರ್ಯಕ್ರಮದ ಬಳಿಕ ಅಂಗನವಾಡಿ ಮಕ್ಕಳು ಹಾಗೂ ಜ್ಞಾನದೀಪ ಮೊಂಟೆಸ್ಸರಿ ವಿದ್ಯಾರ್ಥಿ ಶಿಕ್ಷಕಿಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading