ಅಂಗನವಾಡಿ ಸೇವೆಯಿಂದ ನಿವೃತ್ತಿ: ಸುಜಾತಾ ಬಸ್ತಿಗುಡ್ಡೆ ಅವರಿಗೆ ನ. 19ರಂದು ಸನ್ಮಾನ

ಬೆಳ್ಳಾರೆ: ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ ಸುಮಾರು ಎರಡು ದಶಕಗಳ ಕಾಲ ಸಹಾಯಕಿಯಾಗಿ ಸೇವೆ ಸಲ್ಲಿಸಿ ವಿಶ್ರಾಂತ ಜೀವನಕ್ಕೆ ಕಾಲಿಡುತ್ತಿರುವ ಶ್ರೀಮತಿ ಸುಜಾತಾ ಬಸ್ತಿಗುಡ್ಡೆ ಅವರಿಗೆ ನವೆಂಬರ್ 19ರಂದು ಗೌರವಾರ್ಪಣಾ ಸಮಾರಂಭ ಆಯೋಜಿಸಲಾಗಿದೆ.

. . . . . . . . .

ಅಂದು ಬೆಳಿಗ್ಗೆ 10 ಗಂಟೆಗೆ ಬೆಳ್ಳಾರೆಯ ರಾಜೀವ ಗಾಂಧಿ ಸೇವಾ ಕೇಂದ್ರದಲ್ಲಿ ನಡೆಯಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ದೇವಿಕಾ ಕೆ. ವಹಿಸಲಿದ್ದಾರೆ. ಸುಳ್ಯ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ಅವರು ಸುಜಾತಾ ಬಸ್ತಿಗುಡ್ಡೆ ಅವರನ್ನು ಸನ್ಮಾನಿಸಲಿದ್ದಾರೆ. ಪುತ್ತೂರು ಶಿಶು ಅಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಶ್ರೀಮತಿ ಸುಲೋಚನಾ ಬಿ. ಅಭಿನಂದನಾ ಮಾತುಗಳನ್ನಾಡಲಿದ್ದಾರೆ.

. . . . . . .

ಮುಖ್ಯ ಅತಿಥಿಗಳಾಗಿ ಸುಳ್ಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ಶೈಲಜಾ ಬಿ., ಬೆಳ್ಳಾರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್ ಸಿ.ವಿ., ಸುಳ್ಯ ತಾಲೂಕು ಮಹಿಳೆಯರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷೆ ಶ್ರೀಮತಿ ರಾಜೀವಿ ಆರ್. ರೈ, ಬೆಳ್ಳಾರೆ ಸ್ನೇಹಿತರ ಕಲಾ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯ್ಕ ಕುರುಂಬುಡೇಲು, ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಅಧ್ಯಕ್ಷ ರೊಟೇರಿಯನ್ ಮುಹಮ್ಮದ್ ಆರಿಫ್ ಹಾಗೂ ಜೆ.ಸಿ.ಐ. ಬೆಳ್ಳಾರೆ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ಪೆರ್ಲಂಪಾಡಿ ಭಾಗವಹಿಸಲಿದ್ದಾರೆ.

ಬೆಳ್ಳಾರೆ ವಲಯದ ಶಿಶು ಅಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಶ್ರೀಮತಿ ಉಷಾ ಪ್ರಸಾದ್ ರೈ ಅವರು ಗೌರವ ಉಪಸ್ಥಿತರಿರಲಿದ್ದಾರೆ.

ಅಂಗನವಾಡಿ ಕೇಂದ್ರದಲ್ಲಿ ಎರಡು ದಶಕಗಳ ಕಾಲ ಸೇವೆ ಸಲ್ಲಿಸಿದ ಸುಜಾತಾ ಬಸ್ತಿಗುಡ್ಡೆ ಅವರ ಸೇವೆಯನ್ನು ಸ್ಮರಿಸಿ ಗೌರವಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಭಾರತಿ ಕೆ., ಬಾಲವಿಕಾಸ ಸಮಿತಿ ಅಧ್ಯಕ್ಷೆ ದೇವಿಕಾ ಕೆ. ಹಾಗೂ ಸದಸ್ಯರು, ಪೋಷಕರು ಸರ್ವರಿಗೂ ಸ್ವಾಗತ ಕೋರಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading