- Tuesday
- November 17th, 2026
ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯ ವತಿಯಿಂದ ನವೆಂಬರ್ 17ರಿಂದ 24ರವರೆಗೆ ಗುಜರಾತ್ ರಾಜ್ಯದಲ್ಲಿ ಆಯೋಜಿಸಲಾಗಿರುವ ಅಧ್ಯಯನ ಪ್ರವಾಸ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಸುಳ್ಯ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ನವೆಂಬರ್ 17ರಿಂದ 24ರವರೆಗಿನ ಅವಧಿಯಲ್ಲಿ ಶಾಸಕರು ಸಾರ್ವಜನಿಕ ಭೇಟಿಗೆ ಲಭ್ಯವಿರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.