ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿದ ಕೇಂದ್ರ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ

ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ, ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ನ.17ರಂದು ಬೆಳಿಗ್ಗೆ ಕೇಂದ್ರ ಕೈಗಾರಿಕೆ ಮತ್ತು ಉಕ್ಕು ಸಚಿವರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿ ಅವರು ಭೇಟಿ ನೀಡಿದರು. ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯದಲ್ಲಿ ಭಾಗವಹಿಸಿದ ಅವರು, ಶ್ರೀ ದೇವರ ದರ್ಶನ ಪಡೆದು ತೀರ್ಥ ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಕುಮಾರಸ್ವಾಮಿ ಅವರ ಪತ್ನಿ ಶ್ರೀಮತಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ಸೊಸೆ ಶ್ರೀಮತಿ ರೇವತಿ ನಿಖಿಲ್ ಅವರು ಕುಟುಂಬ ಸಮೇತರಾಗಿ ಆಗಮಿಸಿ ಶ್ರೀದೇವರ ಕೃಪೆಗೆ ಪಾತ್ರರಾದರು.
ಭೇಟಿಯ ವೇಳೆ ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್ ಭೋಜೇಗೌಡ, ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು. ಭಾಗೀರಥಿ ಮುರುಳ್ಯ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಹರೀಶ್ ಇಂಜಾಡಿ, ಕಾರ್ಯನಿರ್ವಹಣಾಧಿಕಾರಿಗಳಾದ ಅರವಿಂದ ಅಯ್ಯಪ್ಪ ಸುತಗುಂಡಿ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಅಶೋಕ್ ನೆಕ್ರಾಜೆ, ಮಾಸ್ಟರ್ ಪ್ಲಾನ್ ಸಮಿತಿಯ ಸದಸ್ಯರಾದ ಲೋಲಾಕ್ಷ ಕೈಕಂಬ, ಜೆಡಿಎಸ್ ಮುಖಂಡರಾದ ಎಂ.ಬಿ. ಸದಾಶಿವ, ಜಾಕೆ ಮಾಧವ ಗೌಡ, ದಯಾಕರ ಆಳ್ವ, ಸೋಮಸುಂದರ ಕೂಜುಗೋಡು, ಮೀರಾ ಸಾಹೆಬ್, ಸುಕುಮಾರ್ ಕೋಡ್ತುಗುಳಿ, ರಾಕೇಶ್ ಕುಂಟಿಕಾನ, ಡಾ. ತಿಲಕ್ ಎ.ಎ., ಉದಯ್ ಕುಮಾರ್ ಡಿ.ಎಸ್., ಶಿವರಾಮ್ ಚಿಲ್ತಡ್ಕ, ಸತ್ಯನಾರಾಯಣ ಚಿಮ್ಮಿಕಲ್ಲು, ಜಯಂತ್ ಪಂಬೆತ್ತಾಡಿ, ನಿಹಾಲ್ ಕೋಡ್ತುಗುಳಿ ಹಾಗೂ ಬಿಜೆಪಿ ಮುಖಂಡರಾದ ವೆಂಕಟ್ ದಂಬೆಕೋಡಿ, ಸಂತೋಷ್ ಜಾಕೆ, ಗಿರಿಧರ ಸ್ಕಂದ, ದಿನೇಶ್ ಬಿ.ಎನ್ ಹಾಗೂ ಕಡಬ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷರಾದ ಸುರೇಶ್ ಬೈಲು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು. (ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading