ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ ; “ಕ್ರೀಡೆಯ ಮೌಲ್ಯಗಳು ಜೀವನದ ಯಶಸ್ಸಿಗೆ ಪೂರಕ” – ಅನೀಶ್ ನಾದ್

ಸುಳ್ಯ: ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ವಾರ್ಷಿಕ ಕ್ರೀಡಾಕೂಟ–2026 ನ.17ರಂದು ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು.

. . . . . . . . .

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸಮಿತಿ ‘ಬಿ’ ಅಧ್ಯಕ್ಷ ಡಾ. ರೇಣುಕಾಪ್ರಸಾದ್ ಕೆ.ವಿ. ಹಾಗೂ ಕಾರ್ಯದರ್ಶಿ ಡಾ. ಜ್ಯೋತಿ ಆರ್. ಪ್ರಸಾದ್ ಅವರ ಸಹಕಾರದೊಂದಿಗೆ ಕ್ರೀಡಾಕೂಟವನ್ನು ಆಯೋಜಿಸಲಾಯಿತು.

. . . . . . .

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕೆ.ವಿ.ಜಿ. ಐಪಿಎಸ್ ಪ್ರಾಂಶುಪಾಲ ಅನೀಶ್ ನಾದ್ ಇ.ಎಂ. ಮಾತನಾಡಿ, “ಕ್ರೀಡೆಯಿಂದ ದೊರೆಯುವ ಮೌಲ್ಯಗಳು ಶೈಕ್ಷಣಿಕ ಹಾಗೂ ವೃತ್ತಿಜೀವನದಲ್ಲಿ ಯಶಸ್ಸು ಸಾಧಿಸಲು ಸಹಕಾರಿಯಾಗುತ್ತವೆ. ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮವಾಗಿರಿಸಿಕೊಳ್ಳಲು ಕ್ರೀಡೆ ಅತ್ಯುತ್ತಮ ಸಾಧನವಾಗಿದ್ದು, ವಿದ್ಯಾರ್ಥಿಗಳ ಜೀವನದಲ್ಲಿ ಕ್ರೀಡೆ ಮಹತ್ವದ ಪಾತ್ರ ವಹಿಸುತ್ತದೆ” ಎಂದರು. ಕ್ರೀಡಾಕೂಟಕ್ಕೆ ಶುಭ ಹಾರೈಸಿದರು.

ಕಾಲೇಜಿನ ಪ್ರಾಂಶುಪಾಲ ಡಾ. ಸುರೇಶ ವಿ. ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳ ಕ್ರೀಡಾಕೂಟಕ್ಕೆ ಶುಭ ಹಾರೈಸಿದರು. ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

ಕ್ರೀಡಾಕೂಟದಲ್ಲಿ ಎನ್.ಎಸ್.ಎಸ್. ವತಿಯಿಂದ ತಂಪು ಪಾನೀಯ ವಿತರಣೆ ಹಾಗೂ ಪ್ರಥಮ ಚಿಕಿತ್ಸಾ ಸೌಲಭ್ಯ ಒದಗಿಸಲಾಯಿತು. ದೈಹಿಕ ಶಿಕ್ಷಣ ನಿರ್ದೇಶಕ ಜಯಚಂದ್ರ, ಕ್ರೀಡಾ ಸಂಯೋಜಕ ಪ್ರೊ. ಅಜಿತ್ ಬಿ.ಟಿ., ಎನ್.ಎಸ್.ಎಸ್. ಘಟಕಾಧಿಕಾರಿ ಪ್ರೊ. ಸತ್ಯಜಿತ್ ಎಂ. ಹಾಗೂ ವಿದ್ಯಾರ್ಥಿ ಕ್ಷೇಮಾಧಿಕಾರಿ ಪ್ರೊ. ಲೋಕೇಶ್ ಪಿ.ಸಿ. ಕಾರ್ಯಕ್ರಮ ಸಂಯೋಜಿಸಿದರು. ಸಹಸಂಸ್ಥೆಗಳ ದೈಹಿಕ ಶಿಕ್ಷಕರು ತೀರ್ಪುಗಾರರಾಗಿ ಸಹಕರಿಸಿದರು.

ಉಪ ಪ್ರಾಂಶುಪಾಲ ಡಾ. ಶ್ರೀಧರ್ ಕೆ., ಕಾಲೇಜಿನ ಆಡಳಿತಾಧಿಕಾರಿ ಬಾಲಚಂದ್ರ ಎಂ., ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading