ಜುಲೈ ಬಳಿಕ ಸ್ಥಗಿತಗೊಂಡ ಗೃಹಲಕ್ಷ್ಮಿ ಹಣ ಬಿಡುಗಡೆಗೆ ಹೊಸ ವ್ಯವಸ್ಥೆ | ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪಿ.ಎಸ್. ಗಂಗಾಧರ ಅವರಿಂದ ಪತ್ರಿಕಾಗೋಷ್ಠಿ

“ಜುಲೈ ತಿಂಗಳ ಬಳಿಕ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆಯಾಗದೆ ಬಾಕಿ ಉಳಿದಿದ್ದು, ಇದೀಗ ಜಿಲ್ಲಾ ಮಟ್ಟದ ಇಲಾಖೆಗಳ ಮೂಲಕ ಹಣ ಬಿಡುಗಡೆ ಮಾಡುವ ಹೊಸ ವ್ಯವಸ್ಥೆ ರೂಪಿಸಲಾಗಿದೆ” ಎಂದು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪಿ.ಎಸ್. ಗಂಗಾಧರ ತಿಳಿಸಿದ್ದಾರೆ.ಸುಳ್ಯದ ಪತ್ರಿಕಾಭವನದಲ್ಲಿ ನ.18ರಂದು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಬಾಕಿ ಇರುವ ಹಣ ಬಿಡುಗಡೆ ಪ್ರಕ್ರಿಯೆಗೆ ಹೊಸ ಕ್ರಮ ಕೈಗೊಳ್ಳಲಾಗಿದ್ದು, ಜಿಲ್ಲಾ ಮಟ್ಟದ ಇಲಾಖೆಗಳ ಮೂಲಕ ಹಣ ಬಿಡುಗಡೆ ಮಾಡಲು ವ್ಯವಸ್ಥೆ ಮಾಡಲಾಗಿದೆ” ಎಂದರು.

. . . . . . . . .

“ಸುಳ್ಯ ವಿಭಾಗದಲ್ಲಿ 24,203 ಹಾಗೂ ಸುಬ್ರಹ್ಮಣ್ಯ ವಿಭಾಗದಲ್ಲಿ 9,938 ಫಲಾನುಭವಿಗಳಿದ್ದು, ಗೃಹಲಕ್ಷ್ಮಿ ಯೋಜನೆಯಡಿ ಒಟ್ಟು 24,838 ಫಲಾನುಭವಿಗಳಿದ್ದಾರೆ. ಈ ಫಲಾನುಭವಿಗಳ ಮಾಹಿತಿಯನ್ನು ಮರುಪರಿಶೀಲಿಸುವ ಉದ್ದೇಶವಿದ್ದು, ಬಾಕಿ ಹಣದ ಮರುಪಡೆಯುವಿಕೆ (Recovery)ಗೆ ಅಗತ್ಯ ವ್ಯವಸ್ಥೆ ರೂಪಿಸಬೇಕಾಗಿದೆ” ಎಂದು ತಿಳಿಸಿದರು.“ಹಣಕಾಸು ಇಲಾಖೆಯಿಂದ ಕ್ಲಿಯರೆನ್ಸ್ ಸರ್ಟಿಫಿಕೇಟ್ ದೊರೆಯದಿರುವುದರಿಂದ ಕೆಲವು ಪ್ರಕ್ರಿಯೆಗಳಲ್ಲಿ ವಿಳಂಬವಾಗಿದೆ. ಈ ಸಮಸ್ಯೆ ಪರಿಹರಿಸಿ ಹಣ ಬಿಡುಗಡೆಗೆ ಮಾಡಲಾಗುವುದು. ಸುಳ್ಯ ತಾಲೂಕಿನಲ್ಲಿ 2023 ರಿಂದ ಇಲ್ಲಿಯವರೆಗೆ ಪಂಚ ಗ್ಯಾರಂಟಿ ಯೋಜನೆಗೆ 312ಕೋಟಿ ರೂಪಾಯಿ ವಿನಿಯೋಗಿಸಲಾಗಿದೆ” ಎಂದು ತಿಳಿಸಿದರು.

. . . . . . .

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯ ನಂದರಾಜ್ ಸಂಕೇಶ್, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಭವಾನಿ ಶಂಕರ್ ಕಲ್ಮಡ್ಕ ಹಾಗೂ ಸುಳ್ಯ ಪಟ್ಟಣ ಪಂಚಾಯತ್ ಮಾಜಿ ಸದಸ್ಯ ಡೇವಿಡ್ ಧೀರಾ ಕ್ರಾಸ್ತಾ ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading