ಮಾಸ್ಟರ್ಸ್ ಅಥ್ಲೆಟಿಕ್ಸ್‌ನಲ್ಲಿ ಹರಿಹರ ಪಳ್ಳತ್ತಡ್ಕದ ಸಂದೀಪ್ ಕೇವಳ ರಾಷ್ಟ್ರಮಟ್ಟಕ್ಕೆ

ಧಾರವಾಡ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ವತಿಯಿಂದ ಧಾರವಾಡ ಜಿಲ್ಲೆಯ ಆರ್.ಎನ್ ಶೆಟ್ಟಿ ಕ್ರೀಡಾಂಗಣದಲ್ಲಿ ನ.14 ಹಾಗೂ 15 ರಂದು ನಡೆದ 45ನೇ ಕರ್ನಾಟಕ ರಾಜ್ಯಮಟ್ಟದ ಮಾಸ್ಟರ್ಸ್ ಕ್ರೀಡಾಕೂಟದಲ್ಲಿ ಹರಿಹರ ಪಳ್ಳತ್ತಡ್ಕ ಗ್ರಾಮದ ಸಂದೀಪ್ ಕೇವಳ ರವರು 30+ ವಯೋಮಾನದ ಗುಂಡೆಸೆತ(ಶಾಟ್‌ಪುಟ್) ಸ್ಪರ್ಧೆಯಲ್ಲಿ ವಿಜೇತರಾಗಿ ಚಿನ್ನದ ಪದಕ ಗಳಿಸಿ ಉತ್ತರ ಪ್ರದೇಶದ ಲಕ್ನೋದಲ್ಲಿ ಮುಂದಿನ ಜನವರಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಅರ್ಹತೆ ಗಳಿಸಿದ್ದಾರೆ. ಇವರು ಸುಳ್ಯ ತಾಲೂಕು ಹರಿಹರ ಪಳ್ಳತ್ತಡ್ಕದ ಗ್ರಾಮದ ಕೇವಳ ದಿ.ದಶರಥ ಗೌಡ ಹಾಗೂ ಮೀನಾಕ್ಷಿ ದಂಪತಿಯ ಪುತ್ರ. (ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading