ನ.20ರಂದು ಸುಳ್ಯದಲ್ಲಿ ಬಿಜೆಪಿಯಿಂದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಪಾದಯಾತ್ರೆ

ಸುಳ್ಯ: ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ಸುಳ್ಯ ನಗರ ಮಹಾಶಕ್ತಿ ಕೇಂದ್ರದ ವತಿಯಿಂದ ರಾಜ್ಯ ಕಾಂಗ್ರೆಸ್ ಸರಕಾರದ ನೀತಿಗಳು ಹಾಗೂ ಸುಳ್ಯ ಪಟ್ಟಣ ಪಂಚಾಯತ್ ವ್ಯಾಪ್ತಿಯ ಸ್ಥಳೀಯ ಸಮಸ್ಯೆಗಳ ವಿರುದ್ಧ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಎಂಬ ಘೋಷಣೆಯೊಂದಿಗೆ ಪ್ರತಿಭಟನಾ ಪಾದಯಾತ್ರೆ ಮತ್ತು ಬೃಹತ್ ಹಕ್ಕೊತ್ತಾಯ ಸಭೆ ನ.20ರಂದು ಶುಕ್ರವಾರ ನಡೆಯಲಿದೆ.

. . . . . . . . .

ಅಂದು ಬೆಳಿಗ್ಗೆ 10 ಗಂಟೆಗೆ ಸುಳ್ಯ ಬಸ್ ನಿಲ್ದಾಣದಿಂದ ಪಾದಯಾತ್ರೆ ಆರಂಭಗೊಂಡು ನಗರ ಪಂಚಾಯತ್ ಕಚೇರಿವರೆಗೆ ಸಾಗಲಿದೆ.ರಾಜ್ಯ ಕಾಂಗ್ರೆಸ್ ಸರಕಾರದ ನೀತಿಗಳ ವಿರುದ್ಧ ಜನಾಂದೋಲನ ನಡೆಸುವ ಜೊತೆಗೆ ಪಟ್ಟಣ ಪಂಚಾಯತ್ ವ್ಯಾಪ್ತಿಯ ಸ್ಥಳೀಯ ಸಮಸ್ಯೆಗಳ ಬಗ್ಗೆ ಗಮನ ಸೆಳೆಯುವುದು ಹಾಗೂ ಜನರ ಹಕ್ಕೊತ್ತಾಯಗಳನ್ನು ಮಂಡಿಸುವ ಉದ್ದೇಶದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

. . . . . . .

ಪಾದಯಾತ್ರೆಯ ಬಳಿಕ ನಗರ ಪಂಚಾಯತ್ ಮುಂಭಾಗದಲ್ಲಿ ಬೃಹತ್ ಹಕ್ಕೊತ್ತಾಯ ಸಭೆ ನಡೆಯಲಿದೆ. ಈ ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘಟಕರು ಮನವಿ ಮಾಡಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading