“ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವಲ್ಲಿ ಪತ್ರಕರ್ತರ ಪಾತ್ರ ಮಹತ್ವದ್ದು” : ಉದಯರವಿ | ದ.ಕ. ಜಿಲ್ಲಾ ರಾಜ್ಯೋತ್ಸ ಪ್ರಶಸ್ತಿ ಪುರಸ್ಕೃತ ಗಂಗಾಧರ ಮಟ್ಟಿ ಅವರಿಗೆ ಅಭಿನಂದನೆ

“ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಜವಾಬ್ದಾರಿ ಪತ್ರಕರ್ತರ ಮೇಲಿದೆ. ಸುಳ್ಯ ಮತ್ತು ಪುತ್ತೂರು ಭಾಗಗಳು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿವೆ. ಇದೇ ರೀತಿಯಲ್ಲಿ ಯುವ ಪತ್ರಕರ್ತರು ಪತ್ರಿಕಾರಂಗದಲ್ಲಿ ಉತ್ತಮ ಕೆಲಸ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು” ಎಂದು ಸುಳ್ಯದ ಪೋಲಿಸ್ ಉಪನಿರೀಕ್ಷಕ ಉದಯರವಿ ಹೇಳಿದರು.

. . . . . . . . .

ಪ್ರೆಸ್ ಕ್ಲಬ್ ಸುಳ್ಯ, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ಘಟಕದ ಸಂಯುಕ್ತ ಆಶ್ರಯದಲ್ಲಿ ನ. 18ರಂದು ದ.ಕ. ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗಂಗಾಧರ ಮಟ್ಟಿ ಅವರಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಪತ್ರಕರ್ತರ ಸ್ನೇಹಕೂಟ ನಡೆಯಿತು.

. . . . . . .

ಸುಳ್ಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ. ಮುಸ್ತಫಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರೆಸ್ ಕ್ಲಬ್ ಅಧ್ಯಕ್ಷ ಶರೀಫ್ ಜಟ್ಟಿಪಳ್ಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಗಣೇಶ್ ಅಮಿನಗಡ ಅವರ ‘ಪತ್ರಕರ್ತನ ಅನುಭವಗಳು’ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಗಂಗಾಧರ ಮಟ್ಟಿ, “ಸಂಘ-ಸಂಸ್ಥೆಗಳು ಬೆಳವಣಿಗೆ ಹೊಂದುವುದನ್ನು ಕಂಡಾಗ ಸಂತೋಷವಾಗುತ್ತದೆ. ಪತ್ರಕರ್ತರು ಉತ್ತಮವಾದ ವರದಿಗಳನ್ನು ಸಿದ್ಧಪಡಿಸಿಕೊಂಡು ವೃತ್ತಿಯಲ್ಲಿ ಬದ್ಧತೆಯಿಂದ ತೊಡಗಿಸಿಕೊಳ್ಳಬೇಕು” ಎಂದರು.

ಈ ಸಂದರ್ಭದಲ್ಲಿ ಕೆವಿಜಿ ಸುಳ್ಯ ಹಬ್ಬ ಸಮಿತಿ ಸ್ಥಾಪಕಾಧ್ಯಕ್ಷ ಎನ್. ಜಯಪ್ರಕಾಶ್ ರೈ, ಪ್ರೆಸ್ ಕ್ಲಬ್ ಗೌರವಾಧ್ಯಕ್ಷ ಹರೀಶ್ ಬಂಟ್ವಾಳ್ ಉಪಸ್ಥಿತರಿದ್ದರು. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಲೋಕೇಶ್ ಪೆರ್ಲಂಪಾಡಿ ಸ್ವಾಗತಿಸಿ, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷ ಯಶ್ವಿತ್ ಕಾಳಮ್ಮನೆ ವಂದಿಸಿ, ಪತ್ರಕರ್ತ ಗಂಗಾಧರ ಕಲ್ಲಪಳ್ಳಿ ಕಾರ್ಯಕ್ರಮ ನಿರೂಪಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading