ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಇನ್ನು ‘ಪ್ರಜಾ ಸೇವಾ ಕೇಂದ್ರ’

ಬೆಂಗಳೂರು: ರಾಜ್ಯದಾದ್ಯಂತ ನಾಗರಿಕರಿಗೆ ವಿವಿಧ ಹೆಸರುಗಳಲ್ಲಿ ಸೇವೆ ನೀಡುತ್ತಿದ್ದ ಸೇವಾ ಕೇಂದ್ರಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ‘ಪ್ರಜಾ ಸೇವಾ ಕೇಂದ್ರ’ ಎಂದು ಮರುನಾಮಕರಣ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಸಾರ್ವಜನಿಕ ಸೇವೆಗಳ ವಿತರಣೆಯಲ್ಲಿ ಏಕರೂಪತೆ ಮತ್ತು ಸ್ಪಷ್ಟತೆ ತರುವ ಉದ್ದೇಶದಿಂದ ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.

. . . . . . . . .

ಇದುವರೆಗೆ ಪ್ರಜಾಸೇವಾ ಇಲಾಖೆಯ ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯದ (EDCS) ಅಡಿಯಲ್ಲಿ ಬೆಂಗಳೂರು ನಗರದಲ್ಲಿ ‘ಬೆಂಗಳೂರು ಒನ್’, ಇತರ ನಗರ ಹಾಗೂ ಪಟ್ಟಣಗಳಲ್ಲಿ ‘ಕರ್ನಾಟಕ ಒನ್’ ಮತ್ತು ಗ್ರಾಮೀಣ ಭಾಗಗಳಲ್ಲಿ ‘ಗ್ರಾಮ ಒನ್’ ಹೆಸರಿನಲ್ಲಿ ಸೇವೆ ಲಭ್ಯವಿತ್ತು. ವಿವಿಧ ಹೆಸರುಗಳಿಂದ ಗುರುತಿಸಲ್ಪಡುತ್ತಿದ್ದ ಈ ಕೇಂದ್ರಗಳ ಕಾರ್ಯನಿರ್ವಹಣೆ ಹಾಗೂ ಗುರುತಿಸುವಿಕೆಯಲ್ಲಿ ಏಕರೂಪತೆ ತರಲು ಒಂದೇ ಹೆಸರನ್ನು ನಿಗದಿಪಡಿಸಲಾಗಿದೆ.

. . . . . . .

ಇನ್ನು ಮುಂದೆ ಎಲ್ಲಾ ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಗ್ರಾಮ ಒನ್ ಕೇಂದ್ರಗಳನ್ನು ‘ಪ್ರಜಾ ಸೇವಾ ಕೇಂದ್ರ’ ಎಂದೇ ಕರೆಯಲಾಗುವುದು. ಅಧಿಕೃತ ಪತ್ರ ವ್ಯವಹಾರ, ನಾಮಫಲಕ, ವೆಬ್‌ಪೋರ್ಟಲ್, ತಂತ್ರಾಂಶ, ಸ್ವೀಕೃತಿ ರಸೀದಿ ಮತ್ತು ಪ್ರಚಾರ ಸಾಮಗ್ರಿಗಳಲ್ಲಿ ಹೊಸ ಹೆಸರನ್ನೇ ಬಳಸುವಂತೆ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಏಕರೂಪ ಬ್ರಾಂಡಿಂಗ್‌ಗೆ ಸೂಚನೆ ಎಲ್ಲಾ ಪ್ರಜಾ ಸೇವಾ ಕೇಂದ್ರಗಳಿಗೆ ಏಕರೂಪದ ಬ್ರಾಂಡಿಂಗ್ ರೂಪಿಸಲು ಸೂಚಿಸಲಾಗಿದ್ದು, ನಾಮಫಲಕ ವಿನ್ಯಾಸ, ಲಾಂಛನ ಮತ್ತು ಬಣ್ಣದ ವಿನ್ಯಾಸ ಸಿದ್ಧಪಡಿಸಿ ಸರ್ಕಾರದ ಅನುಮೋದನೆ ಪಡೆಯುವಂತೆ ಇಡಿಸಿಎಸ್ ನಿರ್ದೇಶಕರಿಗೆ ನಿರ್ದೇಶನ ನೀಡಲಾಗಿದೆ. ಕೇಂದ್ರಗಳ ನಿರ್ವಾಹಕರು ಮತ್ತು ಫ್ರಾಂಚೈಸಿಗಳೊಂದಿಗಿನ ಒಪ್ಪಂದಗಳಲ್ಲೂ ಹೊಸ ಹೆಸರು ಅಳವಡಿಸಿ, ಆದೇಶವನ್ನು ಆದ್ಯತೆಯ ಮೇರೆಗೆ ಜಾರಿಗೊಳಿಸುವಂತೆ ಪ್ರಜಾಸೇವಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಆದೇಶಿಸಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading