ಬೆಳ್ಳಾರೆಯಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಸಮಾರೋಪ

ಬೆಳ್ಳಾರೆ: ಬೆಳ್ಳಾರೆ ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರದ ವತಿಯಿಂದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ಮೂರು ದಿನಗಳ ಕಾಲ ನಡೆದ ಕಾರ್ಯಕ್ರಮದ ಸಮಾರೋಪ ಸಮಾರಂಭ ನ.19ರಂದು ಬೆಳ್ಳಾರೆ ಗ್ರಾಮ ಪಂಚಾಯತ್ ಗ್ರಂಥಾಲಯದ ಸಭಾಭವನದಲ್ಲಿ ನಡೆಯಿತು.

. . . . . . . . .

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಧರ್ಮಸ್ಥಳ ಶ್ರೀ ಕ್ಷೇತ್ರದ ಶ್ರೀಶಕ್ತಿ ಸಂಘದ ಸಮಿತಿಯ ಅಧ್ಯಕ್ಷೆ ದೇವಿಕೆ ವಹಿಸಿದ್ದರು. ಮುಖ್ಯ ಭಾಷಣಕಾರರಾಗಿ ಚುಟುಕು ಸಾಹಿತ್ಯ ವೇದಿಕೆಯ ಅಧ್ಯಕ್ಷೆ ಅಶ್ವಿನಿ ಕೋಡಿಬೈಲು ಭಾಗವಹಿಸಿ ಮಾತನಾಡಿ, ಗ್ರಂಥಾಲಯದ ಮಹತ್ವ, ಸಾಹಿತ್ಯಾಸಕ್ತಿ ಹಾಗೂ ಪುಸ್ತಕ ಓದುವ ಹವ್ಯಾಸದ ಅಗತ್ಯತೆಯನ್ನು ವಿವರಿಸಿದರು. ಓದುವ ಸಂಸ್ಕೃತಿಯನ್ನು ಬೆಳೆಸುವ ಮೂಲಕ ಜ್ಞಾನವೃದ್ಧಿಗೆ ಆದ್ಯತೆ ನೀಡಬೇಕು ಎಂದು ಕರೆ ನೀಡಿದರು.

. . . . . . .

ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಅಧ್ಯಕ್ಷ ಆರಿಫ್ ಬೆಳ್ಳಾರೆ, ಸುಳ್ಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಉಷಾ ಪ್ರಸಾದ್ ರೈ ಹಾಗೂ ಗುಣವತಿ ಮಂಡೆಪು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ಗ್ರಂಥಾಲಯಕ್ಕೆ ನೀರಿನ ಡ್ರಮ್ ಕೊಡುಗೆಯಾಗಿ ನೀಡಲಾಯಿತು. ನಿವೃತ್ತ ಶಿಕ್ಷಕಿ ಸುಭದ್ರಾ ಅವರು ಟೀಪಾಯಿಯನ್ನು ಕೊಡುಗೆಯಾಗಿ ಹಸ್ತಾಂತರಿಸಿದರು.

ಗ್ರಂಥಪಾಲಕಿ ಶಶಿಕಲಾ ಸ್ವಾಗತಿಸಿ,ಗೀತಾ ಪ್ರೇಂ ವಂದಿಸಿದರು.ನಿಶ್ಮಿತಾ ಕಾರ್ಯಕ್ರಮ ನಿರೂಪಿಸಿದರು.

ಯುವತಿ ಮಂಡಲ, ಶ್ರೀಶಕ್ತಿ ಸಂಘಗಳ ಸದಸ್ಯರು, ರೋಟರಿ ಕ್ಲಬ್ ಬೆಳ್ಳಾರೆ ಟೌನ್‌ನ ಸದಸ್ಯರು ಹಾಗೂ ಸ್ಥಳೀಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮೂರು ದಿನಗಳ ಕಾಲ ನಡೆದ ಗ್ರಂಥಾಲಯ ಸಪ್ತಾಹದ ಕಾರ್ಯಕ್ರಮವು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಯಿತು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading