ರಾಜರಾಂಪುರ ಅಂಗನವಾಡಿ ಕೇಂದ್ರದಲ್ಲಿ ನೆಹರೂ ಜಯಂತಿ

ಸಂಪಾಜೆ ಗ್ರಾಮದ ದೊಡ್ಡಡ್ಕ ರಾಜರಾಂಪುರ ಅಂಗನವಾಡಿ ಕೇಂದ್ರದಲ್ಲಿ ಪಂಡಿತ್ ಜವಾಹರಲಾಲ್ ನೆಹರೂ ಜಯಂತಿ ಅಂಗವಾಗಿ ಪುಟಾಣಿ ಮಕ್ಕಳಿಗೆ ಹಾಗೂ ಪೋಷಕರಿಗೆ ವಿವಿಧ ಆಟೋಟ ಸ್ಪರ್ಧೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

. . . . . . . . .

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಲವಿಕಾಶ ಸಮಿತಿ ಅಧ್ಯಕ್ಷರಾದ ಸುಮಿತ್ರಾ ವಹಿಸಿದ್ದರುಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಮತಿ ಶಕ್ತಿವೇಲು ನೆರವೇರಿಸಿ ಕಾರ್ಯಕ್ರಮಕ್ಕೆ ಶುಭಾಶಯ ಸಲ್ಲಿಸಿದರು.ವೇದಿಕೆಯಲ್ಲಿ ಮಾಜಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಎಸ್ ಕೆ .ಹನೀಫ್ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ ಕೆ ಹಮೀದ್ ಗೂನಡ್ಕ ಮಾಜಿ ಸದಸ್ಯರಾದ ಅನುಪಮ, ಕಮ್ಯೂನಿಟಿ ಹೆಲ್ತ್ ಆಫೀಸರ್ ಹರ್ಷಿತಾ ಉಪಸ್ಥಿತರಿದ್ದರು.

. . . . . . .

ಅಂಗನವಾಡಿ ಕಾರ್ಯಕರ್ತೆ ಪುಷ್ಪವತಿ ಸ್ವಾಗತಿಸಿ, ನೆಲ್ಲಿಕುಮೇರಿ ಅಂಗನವಾಡಿ ಕಾರ್ಯಕರ್ತೆ ಧರ್ಮಕಲಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಸ್ಪರ್ಧೆಯಲ್ಲಿ ವಿಜೇತರಾದ ಎಲ್ಲರಿಗೂ ಬಹುಮಾನ ವಿತರಿಸಲಾಯಿತು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading