ರಾಜ್ಯ ಅಗ್ನಿಶಾಮಕ ಇಲಾಖೆಯಲ್ಲಿ 460 ಅಗ್ನಿಶಾಮಕರ ಹುದ್ದೆಗಳ ನೇಮಕಾತಿ ; ನ.23ರಿಂದ ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ – ಡಿ.22 ಕೊನೆಯ ದಿನ

ಬೆಂಗಳೂರು: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯ ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವ 460 ಗ್ರೂಪ್‌-ಸಿ ವೃಂದದ ಅಗ್ನಿಶಾಮಕ (Fire Fighter) ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅರ್ಹ ಪುರುಷ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

. . . . . . . . .

ಆಯ್ಕೆಗೆ ಅರ್ಹರಾಗುವ ಅಭ್ಯರ್ಥಿಗಳು ಇಲಾಖೆಯ ನಿಯಮಾನುಸಾರ ನಡೆಯುವ ದೇಹದಾರ್ಡ್ಯತೆ ಹಾಗೂ ದೈಹಿಕ ಸಾಮರ್ಥ್ಯ ಪರೀಕ್ಷೆಗಳಲ್ಲಿ ಕಡ್ಡಾಯವಾಗಿ ಹಾಜರಾಗಿ ಉತ್ತೀರ್ಣರಾಗಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ 37,500ರಿಂದ 76,100 ರೂ. ವೇತನ ಶ್ರೇಣಿ ನಿಗದಿಪಡಿಸಲಾಗಿದೆ.

. . . . . . .

ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳು-2013 ಹಾಗೂ ಕರ್ನಾಟಕ ನಾಗರಿಕ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮಾವಳಿ-1977 ಮತ್ತು ಸರ್ಕಾರದ ಕಾಲಕಾಲದ ತಿದ್ದುಪಡಿ ಆದೇಶಗಳನ್ವಯ ಅಧಿಸೂಚನೆ ಪ್ರಕಟಿಸಲಾಗಿದೆ.

ಅರ್ಜಿ ಸಲ್ಲಿಕೆಯ ವೇಳಾಪಟ್ಟಿ
– ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ: ನವೆಂಬರ್ 23, 2026
– ಅರ್ಜಿ ಸಲ್ಲಿಸಲು ಕೊನೆಯ ದಿನ: ಡಿಸೆಂಬರ್ 22, 2026
– ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ: ಡಿಸೆಂಬರ್ 23, 2026

ಅರ್ಹ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ https://cetonline.karnataka.gov.in/kea/ ಅಥವಾ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯ https://ksfes.karnataka.gov.in/en ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ನೀಡಿರುವ ಅರ್ಹತೆ, ನಿಯಮಗಳು ಹಾಗೂ ಇತರ ಸೂಚನೆಗಳನ್ನು ಸಂಪೂರ್ಣವಾಗಿ ಓದಿಕೊಳ್ಳಬೇಕು. ಒಮ್ಮೆ ಸಲ್ಲಿಸಿದ ಅರ್ಜಿಯಲ್ಲಿನ ಮಾಹಿತಿಯನ್ನು ನಂತರ ಬದಲಾಯಿಸಲು ಅಥವಾ ತಿದ್ದುಪಡಿ ಮಾಡಲು ಅವಕಾಶವಿರುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading