ಸಹಕಾರ ಕ್ಷೇತ್ರದಲ್ಲಿ ಸಾಧನೆ : ದ.ಕ. ಜೇನು ವ್ಯವಸಾಯಗಾರರ ಸಹಕಾರಿ ಸಂಘಕ್ಕೆ ರಾಜ್ಯಮಟ್ಟದ ಅತ್ಯುತ್ತಮ ಪ್ರಶಸ್ತಿ ಪ್ರದಾನ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿರುವ ಪುತ್ತೂರಿನ ದ.ಕ. ಜೇನು ವ್ಯವಸಾಯಗಾರರ ಸಹಕಾರ ಸಂಘ ನಿಯಮಿತವು ರಾಜ್ಯಮಟ್ಟದ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿಗೆ ಭಾಜನವಾಗಿದೆ.

. . . . . . . . .

73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ನೀಡಲಾಗುವ ರಾಜ್ಯಮಟ್ಟದ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿಗೆ ಸಂಘವು ಆಯ್ಕೆಯಾಗಿದ್ದು, ಜಿಲ್ಲೆಯ ಸಹಕಾರ ಕ್ಷೇತ್ರಕ್ಕೆ ಹೆಮ್ಮೆಯ ಗರಿ ಮೂಡಿಸಿದೆ.ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಹಕಾರ ಸಚಿವ ಲಕ್ಷ್ಮಣ ಸವದಿ ಅವರು ದ.ಕ. ಜೇನು ವ್ಯವಸಾಯಗಾರರ ಸಹಕಾರ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

. . . . . . .

ಕಾರ್ಯಕ್ರಮದಲ್ಲಿ ಶಾಸಕರು ಹಾಗೂ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರಾದ ಜಿ.ಟಿ. ದೇವೇಗೌಡ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಸೇರಿದಂತೆ ಜಿಲ್ಲೆಯ ಸಂಸದರು, ಶಾಸಕರು ಹಾಗೂ ಹಲವು ಗಣ್ಯರು ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading