ಕುಕ್ಕೆ ಸುಬ್ರಹ್ಮಣ್ಯದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ ಯಶಸ್ವಿ

ಕುಕ್ಕೆ ಸುಬ್ರಹ್ಮಣ್ಯ: ಶ್ರೀ ಜ್ಞಾನದೀಪ ವಿದ್ಯಾರ್ಥಿ ಸೇವಾ ಟ್ರಸ್ಟ್ (ರಿ.) (SSLC-2005) ಹಾಗೂ ಕೆವಿಜಿ ದಂತ ಮಹಾವಿದ್ಯಾಲಯ, ಸುಳ್ಯ ಇವರ ಸಹಭಾಗಿತ್ವದಲ್ಲಿ ನ.22 ರಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆಯೋಜಿಸಲಾಗಿದ್ದ ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವು ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಸಂಪುಟ ಶ್ರೀ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠದ ಶ್ರೀಯುತ ಸುದರ್ಶನ ಜೋಯಿಸರು ಉದ್ಘಾಟಿಸಿದರು. ಶ್ರೀ ಜ್ಞಾನದೀಪ ವಿದ್ಯಾರ್ಥಿ ಸೇವಾ ಟ್ರಸ್ಟ್‌ನ ಕೋಶಾಧಿಕಾರಿಗಳಾದ ಡಾ. ರಾಜೇಶ್ವರಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

. . . . . . . . .

ಮುಖ್ಯ ಅತಿಥಿಗಳಾಗಿ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ, ಬೆಳಗಾವಿಯ ನಿವೃತ್ತ ಪ್ರಾದೇಶಿಕ ನಿರ್ದೇಶಕರಾದ ಡಾ. ಶಿವಕುಮಾರ್ ಹೊಸೊಳಿಕೆ, ಸುಬ್ರಹ್ಮಣ್ಯದ ಅನುಗ್ರಹ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷರಾದ ಗಣೇಶ್ ನಾಯರ್, ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಗೂ ಸಮಾಜಸೇವಕರಾದ ರವಿ ಕಕ್ಕೆಪದವು, ಕೆವಿಜಿ ದಂತ ಮಹಾವಿದ್ಯಾಲಯದ ಸಾರ್ವಜನಿಕ ಸಂಪರ್ಕಾಧಿಕಾರಿ (PRO) ಜಯಂತ್ ಹಾಗೂ ಕೆವಿಜಿ ದಂತ ಮಹಾವಿದ್ಯಾಲಯದ ಡಾ. ಆಕಾಂಕ್ಷಾ ಅವರು ಉಪಸ್ಥಿತರಿದ್ದರು.

. . . . . . .

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಭಾಷಣವನ್ನು ಮುರಳಿ ಅವರು ನೆರವೇರಿಸಿದರು. ಸ್ವಾಗತ ಭಾಷಣವನ್ನು ಶ್ರೀಮತಿ ವೀಣಾಶ್ರೀ ಅವರು ಮಾಡಿದರು. ಕಾರ್ಯಕ್ರಮದ ನಿರೂಪಣೆಯನ್ನು ವಿಘ್ನೇಶ್ ಕಾಮತ್ ಅವರು ನಿರ್ವಹಿಸಿದರು.

ಶಿಬಿರದಲ್ಲಿ ಸಾರ್ವಜನಿಕರಿಗೆ ಉಚಿತ ದಂತ ತಪಾಸಣೆ ಹಾಗೂ ಅಗತ್ಯ ದಂತ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸಲಾಯಿತು. ಕೆವಿಜಿ ದಂತ ಮಹಾವಿದ್ಯಾಲಯದ ತಜ್ಞ ವೈದ್ಯರು ಹಾಗೂ ಸಿಬ್ಬಂದಿ ಶಿಬಿರದಲ್ಲಿ ಭಾಗವಹಿಸಿ ಸೇವೆ ಸಲ್ಲಿಸಿದರು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಪ್ರಯೋಜನ ಪಡೆದುಕೊಂಡರು.

ಸಮಾಜಮುಖಿ ಸೇವಾ ಕಾರ್ಯಗಳ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣದ ಆಶಯದೊಂದಿಗೆ ಶ್ರೀ ಜ್ಞಾನದೀಪ ವಿದ್ಯಾರ್ಥಿ ಸೇವಾ ಟ್ರಸ್ಟ್‌ನ ಮತ್ತೊಂದು ಸಾರ್ಥಕ ಸೇವಾ ಕಾರ್ಯ ಯಶಸ್ವಿಯಾಗಿ ನೆರವೇರಿತು. ಸಮಾಜದ ಆರೋಗ್ಯದ ಹಿತದೃಷ್ಟಿಯಿಂದ ಆಯೋಜಿಸಲಾದ ಈ ಶಿಬಿರದ ಯಶಸ್ಸಿಗೆ ಸಹಕರಿಸಿದ ಕೆವಿಜಿ ದಂತ ಮಹಾವಿದ್ಯಾಲಯದ ಆಡಳಿತ ಮಂಡಳಿ, ವೈದ್ಯರು, ಸಿಬ್ಬಂದಿ, ಗಣ್ಯರು, ಟ್ರಸ್ಟ್‌ನ ಪದಾಧಿಕಾರಿಗಳು, ಸದಸ್ಯರು ಹಾಗೂ ಸಹಕರಿಸಿದ ಸರ್ವರಿಗೂ ಟ್ರಸ್ಟ್ ವತಿಯಿಂದ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಲಾಯಿತು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading