ವರ್ಷಿತ್ ಚೊಕ್ಕಾಡಿ ಸೇರಿದಂತೆ ಐವರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣ ರದ್ದುಪಡಿಸಿದ ಹೈಕೋರ್ಟ್

ಸುಳ್ಯ: ಸುಳ್ಯ ಪೊಲೀಸ್ ಠಾಣೆಯಲ್ಲಿ 2024ರ ಸೆಪ್ಟೆಂಬರ್ 23ರಂದು ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವೊಂದನ್ನು ಕರ್ನಾಟಕ ಉಚ್ಚ ನ್ಯಾಯಾಲಯ ರದ್ದುಪಡಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವರ್ಷಿತ್ ಕೆ.ಪಿ. ಚೊಕ್ಕಾಡಿ, ಮಿಥುನ್ ಪಿ.ಎನ್. ಕಲ್ಲುಮುಟ್ಲು, ಹರ್ಷಿತ್ ಸಿ.ಎನ್, ಕುರುಂಜಿಗುಡ್ಡೆ, ಸುಶ್ಮಿತ್ ಬಿ.ಆರ್., ಕೆ.ವಿ. ವಿಜಯ್ ಪೆರ್ಲಂಪಾಡಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಪುರಸ್ಕರಿಸಿರುವ ನ್ಯಾಯಾಲಯ, ಎಫ್‌ಐಆರ್ ಸೇರಿದಂತೆ ಅದರ ಆಧಾರದ ಮೇಲೆ ಸುಳ್ಯದ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ಮುಂದಿನ ಕಾನೂನು ಪ್ರಕ್ರಿಯೆಗಳನ್ನು ರದ್ದುಗೊಳಿಸಿ ಆದೇಶಿಸಿದೆ.

. . . . . . . . .

ಸುಳ್ಯ ಪೊಲೀಸ್ ಠಾಣೆಯಲ್ಲಿ ಕ್ರೈಂ ನಂಬರ್ 113/2024ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಭಾರತೀಯ ನ್ಯಾಯ ಸಂಹಿತೆ 2023ರ ವಿವಿಧ ಸೆಕ್ಷನ್‌ಗಳಾದ 189(2), 191(2), 127(2), 137(2), 115(2), 109, 351(2) ಮತ್ತು 190ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

. . . . . . .

ಪ್ರಕರಣದ ಹಿನ್ನೆಲೆಯ ಪ್ರಕಾರ, 2024ರ ಸೆಪ್ಟೆಂಬರ್ 22 ಮತ್ತು 23ರಂದು ಬೆಳಗಿನ ಜಾವ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಸರಗೋಡಿನ ಅಬ್ದುಲ್ ನಿಯಾಜ್ ಎಂಬವರು, ಬಿಸ್ಲೆ ಘಾಟ್‌ನಲ್ಲಿ ಬಸ್ಸು ಹತ್ತಿದ ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ವಿದ್ಯಾರ್ಥಿನಿ ಬಸ್ ನಿರ್ವಾಹಕರಿಗೆ ಮಾಹಿತಿ ನೀಡಿದ್ದಳು ಎನ್ನಲಾಗಿದೆ. ಬಳಿಕ ಜಲ್ಸೂರು ಬಸ್ ನಿಲ್ದಾಣದ ಬಳಿ ಐವರು ವ್ಯಕ್ತಿಗಳು ಸ್ವಿಫ್ಟ್ ಕಾರಿನಲ್ಲಿ ಬಂದು ತನ್ನನ್ನು ಬಲವಂತವಾಗಿ ಕರೆದೊಯ್ದು ಸುಳ್ಯ ಬಸ್ ನಿಲ್ದಾಣದ ಬಳಿ ಹಲ್ಲೆ ನಡೆಸಿದ್ದಾರೆ ಹಾಗೂ ಬೆದರಿಕೆ ಹಾಕಿದ್ದಾರೆ ಎಂದು ಅಬ್ದುಲ್ ನಿಯಾಜ್ ದೂರು ನೀಡಿದ್ದರು.

ಈ ದೂರಿನ ಆಧಾರದಲ್ಲಿ ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದರು. ಆದರೆ ಪ್ರಕರಣದಲ್ಲಿ ತಮ್ಮನ್ನು ಅನ್ಯಾಯವಾಗಿ ಸಿಲುಕಿಸಲಾಗಿದೆ ಎಂದು ಆರೋಪಿಸಿ ಐವರು ಯುವಕರು ಕರ್ನಾಟಕ ಉಚ್ಚ ನ್ಯಾಯಾಲಯದ ಮೊರೆ ಹೋಗಿದ್ದರು.

ಪ್ರಕರಣದ ಕುರಿತ ಎಲ್ಲ ಅಂಶಗಳನ್ನು ಪರಿಗಣಿಸಿದ ನ್ಯಾಯಾಲಯವು, ಕ್ರಿಮಿನಲ್ ಪ್ರಕರಣವನ್ನು ಮುಂದುವರಿಸುವುದು ಕಾನೂನು ಪ್ರಕ್ರಿಯೆಯ ದುರುಪಯೋಗವಾಗುತ್ತದೆ ಎಂದು ತಿಳಿಸಿ, ಐವರು ಯುವಕರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಪುರಸ್ಕರಿಸಿ, ಸುಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕ್ರೈಂ ನಂಬರ್ 113/2024ರ ಎಫ್‌ಐಆರ್ ಹಾಗೂ ಅದಕ್ಕೆ ಸಂಬಂಧಿಸಿದ ನ್ಯಾಯಾಲಯದ ಮುಂದಿನ ಎಲ್ಲ ಪ್ರಕ್ರಿಯೆಗಳನ್ನು ರದ್ದುಗೊಳಿಸಿ ಅದೇಶಿಸಿದೆ. ಈ ಕೇಸಿನಲ್ಲಿ ಖ್ಯಾತ ವಕೀಲರಾದ ಪಿ.ಪಿ.ಹೆಗ್ಡೆ ವಾದಿಸಿದ್ದರು.ಅ


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading