ಮಡಿಕೇರಿ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಗ್ರೇಡ್-1 ಪ್ರಾಂಶುಪಾಲರಾಗಿ ಪ್ರೊ. ದಯಾನಂದ ಕೆ.ಸಿ. ಅಧಿಕಾರ ಸ್ವೀಕಾರ

ಮಡಿಕೇರಿಯ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಗ್ರೇಡ್-1 ಪ್ರಾಂಶುಪಾಲರಾಗಿ ಪ್ರೊ. ದಯಾನಂದ ಕೆ.ಸಿ. ಅವರು ಅಧಿಕಾರ ಸ್ವೀಕರಿಸಿದ್ದಾರೆ.

. . . . . . . . .

ಇವರು ಈ ಹಿಂದೆ ವಿರಾಜಪೇಟೆಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದರು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಗ್ರೇಡ್-1 ಪ್ರಾಂಶುಪಾಲರ ಹುದ್ದೆಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ಮಡಿಕೇರಿಯ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿಗೆ ಪ್ರಾಂಶುಪಾಲರಾಗಿ ನೇಮಕಗೊಂಡಿದ್ದಾರೆ.

. . . . . . .

ನ.23ರಂದು ಅಧಿಕಾರ ಸ್ವೀಕರಿಸಿದ ಅವರು ಭಾಗಮಂಡಲ ನಾಡಿನ ತಾವೂರು ಗ್ರಾಮದ ಕೂಡಕಂಡಿ ಚಂದ್ರಹಾಸ ಮತ್ತು ಹರಿಣಾಕ್ಷಿ ದಂಪತಿಗಳ ಪುತ್ರ. ಪ್ರಸ್ತುತ ಮಡಿಕೇರಿಯ ಕಾವೇರಿ ಬಡಾವಣೆಯಲ್ಲಿ ನೆಲೆಸಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading