ಡಾ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಪ್ರಯುಕ್ತ ಸೇವಾ ದಿನಾಚರಣೆ : ವನವಾಸಿ ವಿದ್ಯಾರ್ಥಿ ನಿಲಯಕ್ಕೆ ದಿನಸಿ ಸಾಮಗ್ರಿ ವಿತರಣೆ

ಸುಳ್ಯ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಪ್ರಯುಕ್ತ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಸುಳ್ಯ ತಾಲೂಕು ವತಿಯಿಂದ ಸೇವಾ ದಿನಾಚರಣೆಯನ್ನು ಆಚರಿಸಲಾಯಿತು.

. . . . . . . . .

ಈ ಪ್ರಯುಕ್ತ ಸುಳ್ಯದ ವನಸುಮ ವನವಾಸಿ ಕಲ್ಯಾಣ ವಿದ್ಯಾರ್ಥಿ ನಿಲಯಕ್ಕೆ ಅಕ್ಕಿ, ದಿನಸಿ ಸಾಮಗ್ರಿಗಳು ಹಾಗೂ ಹಣ್ಣುಹಂಪಲುಗಳನ್ನು ವಿತರಿಸಲಾಯಿತು.

. . . . . . .

ಈ ಸಂದರ್ಭದಲ್ಲಿ ತಾಲೂಕು ಯೋಜನಾಧಿಕಾರಿ ಮಾಧವ ಗೌಡ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಜಾಲ್ಸೂರು ವಲಯದ ಅಧ್ಯಕ್ಷ ಭಾಸ್ಕರ್ ಅಡ್ಕರ್, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಜಾಲ್ಸೂರು ವಲಯದ ಅಧ್ಯಕ್ಷ ಜಯರಾಮ್ ವಿನೋಬನಗರ, ಜಾಲ್ಸೂರು ಒಕ್ಕೂಟದ ಅಧ್ಯಕ್ಷ ನವೀನ್ ಅಂಬಾಡಿ ಮೂಲೆ, ಅಡ್ಕರ್ ಒಕ್ಕೂಟದ ಅಧ್ಯಕ್ಷ ಗೋಪಾಲ, ಜಾಲ್ಸೂರು ಒಕ್ಕೂಟದ ನಿಕಟಪೂರ್ವ ಅಧ್ಯಕ್ಷ ಗಣೇಶ್ ಅಂಬಾಡಿ ಮೂಲೆ, ವನವಾಸಿ ವಿದ್ಯಾರ್ಥಿ ನಿಲಯ ಸಮಿತಿ ಸದಸ್ಯೆ ವೇದಾ ಶೆಟ್ಟಿ, ಶುಭ, ಜಾಲ್ಸೂರು ವಲಯ ಮೇಲ್ವಿಚಾರಕಿ ಜಯಶ್ರೀ, ಯೋಜನಾ ಕಚೇರಿಯ ಸಿಬ್ಬಂದಿಗಳು, ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವನವಾಸಿ ವಿದ್ಯಾರ್ಥಿ ನಿಲಯದ ವಾರ್ಡನ್ ವೀರಮ್ಮ, ಸೇವಾಪ್ರತಿನಿಧಿಗಳಾದ ಸೌಮ್ಯ ಹಾಗೂ ಪವಿತ್ರ ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading