ಡಿ.17 ರಿಂದ ಕುರಿ ಸಾಕಾಣಿಕೆ ಉಚಿತ ತರಬೇತಿ

ಮಡಿಕೇರಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಉಚಿತವಾಗಿ ನಡೆಸುವ 12 ದಿನಗಳ ಕುರಿ ಸಾಕಾಣಿಕೆ ಉಚಿತ ತರಬೇತಿ ಕಾರ್ಯಕ್ರಮವು ಡಿಸೆಂಬರ್ 17 ರಿಂದ ಆಯೋಜಿಸಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತ 19 ರಿಂದ 49 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾμÉ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಪ್ರದೇಶದ ಆಧಾರ್ ಕಾರ್ಡ್ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.
ತರಬೇತಿಯು ಸಂಪೂರ್ಣವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಡಿಸೆಂಬರ್ 07 ಕೊನೆಯ ದಿನ.
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ 9740982585, 9481506564, 9380162042, 9241482541 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ಗಿರಿಧರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

. . . . . . . . .

ಅರ್ಹತೆಗಳು:- 18 ರಿಂದ 50 ವಯಸ್ಸಿನವರಾಗಿರಬೇಕು, ಗಾಮೀಣ ಪ್ರದೇಶದವರಾಗಿರಬೇಕು, BPL ಕಾರ್ಡ್ ಹೊಂದಿರಬೇಕು.
ನೀಡಬೇಕಾದ ದಾಖಲೆ (ಜೆರಾಕ್ಸ್):-

. . . . . . .

1. ಬಿಪಿಎಲ್‌ ರೇಷನ್‌ ಕಾರ್ಡ್‌-2

2. ಆಧಾರ್‌ ಕಾರ್ಡ್‌-2

3. ಜಾತಿ ಅಥವಾ ಆದಾಯ ಪ್ರಮಾಣ ಪತ್ರ & (TC)-1

4. ₹250/-(ಹಿಂತಿರುಗಿಸಲಾಗುವುದು)

5. 4 ಭಾವಚಿತ್ರಗಳು(Photo)

https://forms.gle/FcypqziffxHHCzfx5

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading