ವಿಶ್ವ ಏಡ್ಸ್ ದಿನಾಚರಣೆ ಪ್ರಯುಕ್ತ ಡಿ. 1ರಂದು ಸುಳ್ಯದಲ್ಲಿ ಬೃಹತ್ ರಕ್ತದಾನ ಶಿಬಿರ

ಸುಳ್ಯ: ವಿಶ್ವ ಏಡ್ಸ್ ದಿನಾಚರಣೆಯ ಅಂಗವಾಗಿ ಸುಳ್ಯ ರೋಟರಿ ಕ್ಲಬ್, ಇನ್ನರ್ ವೀಲ್ ಕ್ಲಬ್ ಸುಳ್ಯ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಸುಳ್ಯ, ಎನ್.ಎಂ.ಸಿ. ಸುಳ್ಯದ ಎನ್‌ಎಸ್‌ಎಸ್ ಹಾಗೂ ರೆಡ್ ರಿಬ್ಬನ್ ಕ್ಲಬ್, ಎಚ್‌ಡಿಎಫ್‌ಸಿ ಬ್ಯಾಂಕ್, ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್, ಬಿಎಂಎಸ್ ಆಟೋ ಯೂನಿಯನ್ ಮತ್ತು ಸುಳ್ಯ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ (ರಿ.) ಇವುಗಳ ಜಂಟಿ ಆಶ್ರಯದಲ್ಲಿ ಡಿ. 1ರಂದು ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ.

. . . . . . . . .

ಡಿ.1 ರಂದು ಬೆಳಿಗ್ಗೆ 9.30ಕ್ಕೆ ಸುಳ್ಯದ ರಥಬೀದಿಯ ರೋಟರಿ ಸಮುದಾಯ ಭವನದಲ್ಲಿ ಶಿಬಿರ ನಡೆಯಲಿದೆ.ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷೆ ರೋಟೇರಿಯನ್ ಲತಾ ಮಧುಸೂಧನ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಸುಳ್ಯ ನಗರಾಭಿವೃದ್ಧಿ ಪ್ರಾಧಿಕಾರದ (SUDA) ಅಧ್ಯಕ್ಷ ಕೆ.ಎಂ. ಮುಸ್ತಫಾ ಉದ್ಘಾಟಿಸಲಿದ್ದಾರೆ.

. . . . . . .

ಮುಖ್ಯ ಅತಿಥಿಗಳಾಗಿ ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್‌ನ ವೈದ್ಯಾಧಿಕಾರಿ ರೋ. ಡಾ. ರಾಮಕೃಷ್ಣ ರಾವ್, ಸುಳ್ಯ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ ಅಧ್ಯಕ್ಷ ರೋ. ಅಬ್ದುಲ್ ಹಮೀದ್ ಜೆ.ಎಸ್., ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಸುಳ್ಯದ ಅಧ್ಯಕ್ಷ ಪಿ.ಬಿ. ಸುಧಾಕರ ರೈ, ರೋಟರಿ ಸುಳ್ಯ ಸಿಟಿ ಅಧ್ಯಕ್ಷ ರೋ. ರಾಗೇಶ್ ರಾಘವ್, ಇನ್ನರ್ ವೀಲ್ ಕ್ಲಬ್ ಸುಳ್ಯದ ಅಧ್ಯಕ್ಷೆ ಡಾ. ಪ್ರಜ್ಞಾ ಎಂ.ಆರ್., ಎಚ್‌ಡಿಎಫ್‌ಸಿ ಬ್ಯಾಂಕ್ ಪುತ್ತೂರಿನ ಸಹಾಯಕ ವ್ಯವಸ್ಥಾಪಕಿ ರಕ್ಷಿತಾ ಎನ್., ಯುವ ರೆಡ್‌ಕ್ರಾಸ್ ಸುಳ್ಯದ ಅಧ್ಯಕ್ಷ ಸಂಜೀವ ಕುದ್ಪಾಜೆ ಹಾಗೂ ಬಿಎಂಎಸ್ ಆಟೋ ಯೂನಿಯನ್‌ನ ಪ್ರಕಾಶ್ ಬಂಗೇರ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ರೋಟರಿ ಸುಳ್ಯದ ಕಾರ್ಯದರ್ಶಿ ರೋ. ಹರಿರಾಯ ಕಾಮತ್, ಇನ್ನರ್ ವೀಲ್ ಕ್ಲಬ್ ಕಾರ್ಯದರ್ಶಿ ಡಾ. ಸ್ಮಿತಾ, ರೋಟರಿ ಸುಳ್ಯ ಸಿಟಿಯ ಕಾರ್ಯದರ್ಶಿ ರೋ. ಪುರಂದರ ರೈ, ಎನ್‌ಎಸ್‌ಎಸ್ ಮತ್ತು ರೆಡ್ ರಿಬ್ಬನ್ ಕ್ಲಬ್‌ನ ಘಟಕ 1ರ ಅಧಿಕಾರಿ ಚಿತ್ರಲೇಖಾ ಕೆ.ಎಸ್., ಘಟಕ 2ರ ಅಧಿಕಾರಿ ಹರಿಪ್ರಸಾದ್ ಎ.ವಿ. ಹಾಗೂ ಸುಳ್ಯ ಚೇಂಬರ್ ಆಫ್ ಕಾಮರ್ಸ್‌ನ ಕಾರ್ಯದರ್ಶಿ ರಮೇಶ್ ಶೆಟ್ಟಿ ಉಪಸ್ಥಿತರಿರುವರು. ಈ ಶಿಬಿರದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸ್ವಯಂಪ್ರೇರಿತವಾಗಿ ರಕ್ತದಾನ ಮಾಡುವಂತೆ ಸಂಘಟಕರು ಮನವಿ ಮಾಡಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading