Ad Widget

ಕಾಂತಮಂಗಲ : ಆಯುಷ್ಮಾನ್ ಕಾರ್ಡ್ ನೋಂದಣಿ ಹಾಗೂ ವಿತರಣಾ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಮಹಿಳಾ ಜ್ಞಾನ ವಿಕಾಸ ಸೃಜನಶೀಲ ಕಾರ್ಯಕ್ರಮದಡಿ ಸರಕಾರಿ ಸೌಲಭ್ಯಗಳಲ್ಲಿ ಒಂದಾದ ಆಯುಷ್ಮಾನ್ ಕಾರ್ಡ್ ನೋಂದಣಿ ಹಾಗೂ ವಿತರಣಾ ಕಾರ್ಯಕ್ರಮವು ಕಾಂತಮಂಗಲ ಶಾಲಾ ಸಭಾಂಗಣದಲ್ಲಿ ಸೆ.20 ರಂದು ಜರುಗಿತು. ಕಾರ್ಯಕ್ರಮವನ್ನು ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಎನ್.ಎ.ರಾಮಚಂದ್ರ ಉದ್ಘಾಟಿಸಿದರು. ಆಯುಷ್ಮಾನ್ ಕಾರ್ಡ್ ನಿಂದ ಸಿಗುವ ಆರೋಗ್ಯ ಸೌಲಭ್ಯಗಳ ಕುರಿತು ತಾಲೂಕು ಜ್ಞಾನವಿಕಾಸ ಸಮನ್ವಯ ಅಧಿಕಾರಿ ಶ್ರೀಮತಿ ಭಾರತಿ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕರಾದ ಉಷಾ ಕಲ್ಯಾಣಿ , ಸಿ .ಎ. ಬ್ಯಾಂಕ್ ಉಪಾಧ್ಯಕ್ಷರಾದ ವೆಂಕಟ್ರಮಣ, ಕಾಂತಮಂಗಲ ಶಾಲಾಭಿವೃದ್ಧಿ ಅಧ್ಯಕ್ಷರಾದ ಕುಶಲ , ನಿಕಟಪೂರ್ವ ಒಕ್ಕೂಟ ಅಧ್ಯಕ್ಷರಾದ ಚಂದ್ರಶೇಖರ , ನವಜೀವನ ಸಮಿತಿ ಅಧ್ಯಕ್ಷರಾದ ಬಾಲಸುಬ್ರಹ್ಮಣ್ಯ , ಸಾಮಾಜಿಕ ಕಾರ್ಯಕರ್ತರಾದ ಜಿ.ಜಿ.ನಾಯಕ್ ಹಾಗೂ ಒಕ್ಕೂಟದ ಪದಾಧಿಕಾರಿಗಳು, ತಂಡದ ಸದಸ್ಯರು ಉಪಸ್ಥಿತರಿದ್ದರು.

. . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!