Ad Widget

ಮಳೆಹಾನಿ ಪ್ರದೇಶಗಳಿಗೆ ಸುಳ್ಯ ತಹಶೀಲ್ದಾರ್ ಅನಂತ ಶಂಕರ್ ಭೇಟಿ

ಕಳೆದ ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಗೆ ನಗರದ ವಿವಿಧ ಭಾಗಗಳಲ್ಲಿ ತಡೆ ಗೋಡೆಗಳು ಕುಸಿದು ಅಪಾರ ನಷ್ಟ ಉಂಟಾಗಿದೆ. ಕಲ್ಲುಮುಟ್ಲು ಅಂಗನವಾಡಿಯ ಬಳಿ , ಬೂಡು ಪರಿಸರದಲ್ಲಿ ಸುಮಾರು 20ಕ್ಕೂ ಹೆಚ್ಚು ಅಡಿಗಳ ಬೃಹತ್ ತಡೆಗೋಡೆಗಳು ಕುಸಿದು ಮನೆಗಳು ಅಪಾಯದ ಅಂಚಿನಲ್ಲಿ ಇದೆ. ಎಲ್ಲ ಪ್ರದೇಶಗಳಿಗೆ ಸೆಪ್ಟೆಂಬರ್ 21ರಂದು ಸುಳ್ಯ ತಹಶೀಲ್ದಾರ್ ಅನಂತ್ ಶಂಕರ್ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಸುಳ್ಯ ಗ್ರಾಮ ಲೆಕ್ಕಾಧಿಕಾರಿ ತಿಪ್ಪೇಶ್, ಕಂದಾಯ ನಿರೀಕ್ಷಕ ಕೊರಗಪ್ಪ ಹೆಗ್ಡೆ, ಪಂಜ ಕಂದಾಯ ನಿರೀಕ್ಷಕ ಶಂಕರ್, ವಾರ್ಡ್ ಸದಸ್ಯ ಸುಧಾಕರ ಕುರುಂಜಿಭಾಗ್ ಬಿಜೆಪಿ ಯುವಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಗುರುದತ್ ನಾಯಕ್ ಸುಳ್ಯ, ಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲದ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಕೇರ್ಪಳ ಮೊದಲಾದವರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading