ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘ (ರಿ.) ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯವ್ಯಾಪಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಇದರ ಅಂಗವಾಗಿ ಸುಳ್ಯದ ತಾಲೂಕು ಆರೋಗ್ಯಾಧಿಕಾರಿ ಕಚೇರಿಯಲ್ಲಿ ಸೆ.23 ರಂದು ಪ್ರತಿಭಟಿಸಲಾಯಿತು.
ಕೋವಿಡ್ – 19 ರ ಈ ಸಂಕಟ ಕಾಲದಲ್ಲಿ ಕೊರೋನಾ ವಾರಿಯರ್ಸ್ ಗಳಾಗಿ ಸೇವೆ ಸಲ್ಲಿಸುತ್ತಿರುವ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಸಮಾನ ಕೆಲಸಕ್ಕೆ ಸಮಾನ ವೇತನ, ಸೇವಾ ಭದ್ರತೆ, ಆರೋಗ್ಯ ಮತ್ತು ಜೀವ ವಿಮೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಾಗಿದ್ದು, ಸೆ.24ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂದು ತಿಳಿದುಬಂದಿದೆ.