ಕಳೆದ ಎರಡು ವರ್ಷಗಳಿಂದ ಸುಳ್ಯ ನಗರ ಪಂಚಾಯತ್ ಕಟ್ಟಡದ ಆವರಣದಲ್ಲಿ ರಾಶಿ ಬಿದ್ದಿರುವ ಕಸದ ರಾಶಿಗಳನ್ನು ಕೂಡಲೇ ಸೂಕ್ತ ಸ್ಥಳಕ್ಕೆ ತೆರವುಗೊಳಿಸದಿದ್ದಲ್ಲಿ ನಗರ ಪಂಚಾಯತ್ ಕಚೇರಿಯ ಮುಂಭಾಗದಲ್ಲಿ ಪೈಚಾರ್ ಕಾರುಣ್ಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಗ್ರ ಪ್ರತಿಭಟನೆ ಮಾಡುವುದಾಗಿ ಟ್ರಸ್ಟ್ ನ ಅಧ್ಯಕ್ಷ ಆರ್ ಬಿ ಬಶೀರ್ ಪತ್ರಿಕಾ ಹೇಳಿಕೆ ನೀಡಿರುತ್ತಾರೆ.
ಈ ಸಂಬಂಧ ಕಳೆದ ಜೂನ್ ತಿಂಗಳ 17ರಂದು ಟ್ರಸ್ಟ್ ವತಿಯಿಂದ ನಗರ ಪಂಚಾಯಿತಿಯ ಮುಖ್ಯಾಧಿಕಾರಿಗೆ ಮನವಿ ನೀಡಲಾಗಿದೆ. ಅದೇ ರೀತಿ ನಗರದ ಹಲವು ಸಂಘಸಂಸ್ಥೆಗಳು, ಜನನಾಯಕರು ಮನವಿಯ ಮೇಲೆ ಮನವಿಯನ್ನು ನೀಡುತ್ತಿದ್ದರು , ಕಸವನ್ನು ತೆರವುಗೊಳಿಸುವ ಕಾರ್ಯದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಮೀನಾಮೇಶ ವನ್ನು ಎಣಿಸುತ್ತಿದ್ದಾರೆ. ಇವರ ಈ ಕಾರ್ಯವೈಖರಿಯಿಂದ ಸುಳ್ಯದ ಜನತೆ ತಲೆತಗ್ಗಿಸುವಂತಾಗಿದೆ.ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಇದರ ಬಗ್ಗೆ ಸ್ಪಂದನೆ ನೀಡದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಅವರು ತಿಳಿಸಿರುತ್ತಾರೆ.