ಅರಂತೋಡು ಗ್ರಾಮದ ಅಡ್ತಲೆ ಪ್ರದೇಶಕ್ಕೆ ನಿರಂತರ ವಿದ್ಯುತ್ ಸಮಸ್ಯೆ ಉಂಟಾಗುತ್ತಿದ್ದು ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಕರೆಂಟ್ ಇದ್ದರೆ ಮಾತ್ರ ಇರುವ ನೆಟ್ವರ್ಕ್, ವಿದ್ಯಾರ್ಥಿಗಳ ಆನ್ಲೈನ್ ಶಿಕ್ಷಣಕ್ಕೆ ತೊಡಕುಂಟಾಗುತ್ತಿದ್ದು ಜನಪ್ರತಿನಿಧಿಗಳು ಇಂತಹ ಪ್ರದೇಶಗಳನ್ನು ಗುರುತಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಿತ್ತು. ಆದರೆ ಯಾವ ಜನಪ್ರತಿನಿಧಿಗಳೂ ಈ ಭಾಗದ ಸಮಸ್ಯೆಯನ್ನು ಕೇಳದಂತಹ ಪರಿಸ್ಥಿತಿ ಏರ್ಪಟ್ಟಿದೆ. ಕುಡಿಯುವ ನೀರಿನ ಸಮಸ್ಯೆ ಕೂಡ ಕೆಲವೆಡೆ ಇದ್ದು, ಗ್ರಾಮೀಣ ಭಾಗದ ರಸ್ತೆಗಳು ಕುಲಗೆಟ್ಟು ಹೋಗಿವೆ. ಜನಪ್ರತಿನಿಧಿಗಳು ಇನ್ನಾದರೂ ಇಂತಹ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸಬೇಕೆಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.
- Saturday
- November 23rd, 2024