ನಮ್ಮ ಮುಂದಿನ ಭವಿಷ್ಯದ ದೃಷ್ಠಿಯಿಂದ ಜಲ ಸಂರಕ್ಷಣೆ ಅಗತ್ಯ ಇದೆ ಎಂದು ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ ಹೇಳಿದರು. ಅವರು ತೊಡಿಕಾನ ಹಾಲು ಸೊಸೈಟಿಯಲ್ಲಿ ಜಿಲ್ಲಾ ಪಂಚಾಯತ್ ಅನುದಾನ ದಿಂದ ನಿರ್ಮಿಸಿದ ಜಲಮರುಪೂರಣ ಯೋಜನೆಗೆ ಚಾಲನೆ ನೀಡಿ ನಂತರ ನಡೆದ ಸಭಾ ಕಾರ್ಯಕ್ರಮಲ್ಲಿ ಮಾತನಾಡಿದರು. ನಮ್ಮ ಭಾಗದಲ್ಲಿ ಬೇಸಿಗೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಜಲಕ್ಷಾಮ ತಲೆದೊರದಿದ್ದರೂ ನಮ್ಮ ಮುಂದಿನ ಪೀಳಿಗೆಯ ದೃಷ್ಠಿಯಿಂದ ನೀರಿನ ಪ್ರಮಾಣ ಹೆಚ್ಚಿಸುವ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾಗಿದೆ ಎಂದು ಅವರು ಹೇಳಿದರು.
ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಪುಷ್ಪಾಮೇದಪ್ಪ, ಅರಂತೋಡು ತೊಡಿಕಾನ ಕ್ರಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಮುಖ್ಯ ಅತಿಥಿಗಳಾಗಿ ಭಾವಹಿಸಿದರು.
ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆ ಪ್ರೇಮ ವಸಂತ್ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಘದ ಮಾಜಿ ಅಧ್ಯಕ್ಷೆ ಚಂದ್ರಕಲಾ ಕುತ್ತಮೊಟ್ಟೆ , ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟ ಅಧ್ಯಕ್ಷೆ ವಿನೋಧ, ವಸಂತ ಭಟ್ಟ , ತೊಡಿಕಾನ ದೇವಳದ ಮ್ಯಾನೇಜರ್ ಆನಂದ ಕಲ್ಲಗದ್ದೆ, ಕೆ.ಕೆ ನಾರಾಯಣ, ಜನಾರ್ದನ ಬಾಳಕಜೆ, ತಿಮ್ಮಯ್ಯ ಮೆತ್ತಡ್ಕ , ಸಂಘದ ನಿರ್ದೇಶಕರು, ಸದಸ್ಯರು, ಉಪಸ್ಥಿತರಿದ್ದರು. ನಿರ್ದೇಶಕಿ ಸಾವಿತ್ರಿ ಭಟ್ ಸ್ವಾಗತಿಸಿದರು.
- Friday
- November 1st, 2024