ಸಮಾಜದಲ್ಲಿ ವ್ಯಾಪಕವಾಗಿ ಹರಡಿರುವ ಡ್ರಗ್ಸ್ ಮಾಫಿಯಾವನ್ನು ತಡೆಗಟ್ಟಲು ಸೂಕ್ತ ಕಾನೂನನ್ನು ರೂಪಿಸಿ ಡ್ರಗ್ಸ್ ಮುಕ್ತ ಕರ್ನಾಟಕ ಮಾಡಲು ವಿದ್ಯಾರ್ಥಿ ಪರಿಷತ್ ವತಿಯಿಂದ ಇಂದು ಸುಬ್ರಹ್ಮಣ್ಯ ದ ಅಂಚೆ ಕಛೇರಿ ಬಳಿ ಪತ್ರ ಚಳುವಳಿಯನ್ನು ಹಮ್ಮಿಕೊಂಡಿತ್ತು. ಪತ್ರಗಳನ್ನು ಮುಖ್ಯಮಂತ್ರಿಗಳ ವಿಳಾಸಕ್ಕೆ ಕಳುಹಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿ ಪರಿಷತ್ ನ ನಗರ ಕಾರ್ಯದರ್ಶಿಯಾದ ಹಿತೇಶ್ ಕಟ್ರಮನೆ, ಕೆ.ಎಸ್.ಎಸ್ ಕಾಲೇಜಿನ ವಿದ್ಯಾರ್ಥಿ ನಾಯಕರಾದ ರಕ್ಷಿತ್ ಪರಮಲೆ, ಹಾಗೂ ವಿದ್ಯಾರ್ಥಿ ಪರಿಷತ್ ನ ಕಾರ್ಯಕರ್ತರು ಉಪಸ್ಥಿತರಿದ್ದರು.
- Friday
- November 22nd, 2024