ಕಳೆದ ಒಂದು ವಾರಗಳಲ್ಲಿ ಹೆಣ್ಣು ಮಕ್ಕಳ ಮೇಲಿನ ಲೈಂಗಿಕ ಕಿರುಕುಳದ 2 ಪ್ರಕರಣಗಳು ಸುಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಇದರೊಂದಿಗೆ ಕಳೆದ ಒಂದೇ ತಿಂಗಳಿನಲ್ಲಿ ಮೂರು ಪ್ರಕರಣಗಳು ಬೆಳಕಿಗೆ ಬಂದಿವೆ. ಕಳೆದ ಕೆಲವು ದಿನಗಳ ಹಿಂದೆ ಅರಂಬೂರು ಪರಿಸರದಲ್ಲಿ ಮಾನಸಿಕ ಅಸ್ವಸ್ಥೆ ಅಪ್ರಾಪ್ತೆ ಹೆಣ್ಣುಮಗಳ ಮೇಲೆ ನಡೆದಿದೆ ಎನ್ನಲಾದ ಲೈಂಗಿಕ ದೌರ್ಜನ್ಯದ ಪ್ರಕರಣ ಈಗಾಗಲೇ ಸುಳ್ಯ ಪೊಲೀಸರು ತನಿಖೆ ನಡೆಸುತ್ತಿದ್ದು , ಇದೀಗ ಸೆಪ್ಟೆಂಬರ್ 28 ರಂದು ರಾತ್ರಿ ಕಲ್ಲುಮುಟ್ಲು ಪರಿಸರದಲ್ಲಿ ಅಪ್ರಾಪ್ತ ವಯಸ್ಸಿನ ಹೆಣ್ಣಿನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ದೂರು ದಾಖಲಾಗಿದೆ. ಈ ಪ್ರಕರಣಗಳು ಪೋಕ್ಸೋ ಕಾಯ್ದೆ ಅಡಿಯಲ್ಲಿ ಬರುವ ಹಿನ್ನೆಲೆಯಲ್ಲಿ ಪುತ್ತೂರು ಎಎಸ್ಪಿ ಇಂದು ಸುಳ್ಯಕ್ಕೆ ಭೇಟಿನೀಡಿ ಘಟನೆಯ ವಿವರಗಳ ಬಗ್ಗೆ ಮಾಹಿತಿ ಪಡೆದಿರುವುದಾಗಿ ತಿಳಿದು ಬಂದಿದೆ. ಈ ವಿಷಯದ ಕುರಿತು ಸುಳ್ಯ ಪೊಲೀಸ್ ಅಧಿಕಾರಿಗಳು ಹೆಚ್ಚಿನ ಪ್ರಮಾಣದಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು ತೀವ್ರ ತನಿಖೆ ಆರಂಭಿಸಿದ್ದಾರೆ. ಇದೇ ಸಂದರ್ಭದಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪತ್ರಿಕೆಗೆ ಹೇಳಿಕೆಯನ್ನು ನೀಡಿದ ಅವರು ತಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಅನುಮಾನಸ್ಪದ ವ್ಯಕ್ತಿಗಳು ಹಾಗೂ ಅಸಭ್ಯ ವರ್ತನೆಗಳ ಘಟನೆಗಳ ಬಗ್ಗೆ ಕಂಡುಬಂದಲ್ಲಿ ಕೂಡಲೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ವಿನಂತಿಸಿಕೊಂಡಿದ್ದಾರೆ.
- Friday
- November 1st, 2024