Ad Widget

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ವತಿಯಿಂದ ಮಹಾತ್ಮ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ

ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಸಹಯೋಗದಲ್ಲಿ ಎರಡೂ ಸ್ಥಳೀಯ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸ್ಕೌಟ್ ಗೈಡ್ ಶಿಕ್ಷಕರನ್ನು ಒಳಗೊಂಡಂತೆ ಮಹಾತ್ಮ ಗಾಂಧಿ ಜನ್ಮದಿನಾಚರಣೆಯನ್ನು ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯಲ್ಲಿ ಬಿಇಒ ಮಹದೇವ ಎಸ್ ಪಿ ಇವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಯಿತು.

. . . . . . . . .

ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ರವರ ಭಾವಚಿತ್ರಕ್ಕೆ ಪುಷ್ಪನಮನ ಅರ್ಪಿಸಿ ಗೌರವ ಸಲ್ಲಿಸಲಾಯಿತು. ಬಳಿಕ ಸರ್ವಧರ್ಮ ಪ್ರಾರ್ಥನೆ ಜರಗಿತು. ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಲಕ್ಷ್ಮೀಶ ರೈ, ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷರಾಗಿರುವ ಶ್ರೀ ತೀರ್ಥರಾಮ ಹೆಚ್.ಬಿ., ಸರಕಾರಿ ನೌಕರರ ರಾಜ್ಯ ಪರಿಷತ್ತಿನ ಸದಸ್ಯರಾದ ಪೃಥ್ವಿ ಕುಮಾರ್, ಪಂಜ ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಮಾಧವ ಬಿ ಕೆ, ಸುಳ್ಯ ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಬಾಪೂ ಸಾಹೇಬ್, ಶಿಕ್ಷಣ ಸಂಯೋಜಕರು, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳು, ಕಛೇರಿ ಸಿಬ್ಬಂದಿಗಳು,ಸ್ಕೌಟ್ ಗೈಡ್ ಶಿಕ್ಷಕರು, ರೇಂಜರ್ ಗಳು ಒಟ್ಟು ಸೇರಿ 32 ಮಂದಿ ಭಾಗವಹಿಸಿದ್ದರು. ಸುಳ್ಯ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಲಿಂಗಪ್ಪ ಬೆಳ್ಳಾರೆ ಸ್ವಾಗತಿಸಿ, ಶಿಕ್ಷಣ ಸಂಯೋಜಕಿ ಗೈಡರ್ ಸಂಧ್ಯಾಕುಮಾರಿ ವಂದಿಸಿದರು. ಕಾರ್ಯಕ್ರಮವನ್ನು ಪಂಜ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಉದಯ ಕುಮಾರ್ ರೈ ಬಾಳಿಲ ನಿರೂಪಿಸಿದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading