ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘ ನಡೆಸುತ್ತಿರುವ ಅನಿರ್ದಿಷ್ಟಾವಧಿ ಹೋರಾಟ 12 ನೇ ದಿನಕ್ಕೆ ಕಾಲಿಟ್ಟಿದೆ. ಸೋಮವಾರವೂ ಸುಳ್ಯ ತಾಲೂಕು ಕಛೇರಿ ಎದುರು ಪ್ರತಿಭಟನೆ ನಡೆಸಿ ಆಕ್ರೋಶವನ್ನು ವ್ಯಕ್ತಪಡಿಸಲಾಯಿತು. ಹಲವಾರು ವರ್ಷಗಳಿಂದ ನ್ಯಾಯಯುತವಾದ ಬೇಡಿಕೆಗಳನ್ನು ಈಡೇರಿಸುವಂತೆ ಎಲ್ಲಾ ಹಂತಗಳಲ್ಲಿ ಹೋರಾಟ ನಡೆಸಿದರೂ ಸಹ ಸ್ಪಂದಿಸದೆ ಸರಕಾರದ ನೌಕರ ವಿರೋಧಿ ಧೋರಣೆ ಹಾಗೂ ಒಡೆದು ಆಳುವ ಪ್ರವೃತ್ತಿ ಅನುಸರಿಸುತ್ತಿರುವುದು ವಿಷಾದನೀಯ. ಕೊರೋನಾ ಸಂದರ್ಭದಲ್ಲಿಯೂ ಜೀವ ಪಣಕ್ಕಿಟ್ಟು ಕೆಲಸ ಮಾಡಿದರೂ ಅಂತಹ ಬಡ ನೌಕರರ ಬೇಡಿಕೆಗೆ ಸ್ಪಂದಿಸದೇ ಇರುವುದು ಖಂಡನೀಯ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಈ ಸಂದರ್ಭದಲ್ಲಿ ತಾಲೂಕು ಪ್ರಧಾನ ಕಾರ್ಯದರ್ಶಿ ರಾಜಶೇಖರ್ ಕಣಕ್ಕೂರು, ಸಂಚಾಲಕರಾದ ಲೋಕೇಶ್ ತಂಟೆಪ್ಪಾಡಿ , ಶ್ರೀಮತಿ ಕುಮುದಾಕ್ಷಿ, ಶ್ರೀಮತಿ ದಿವ್ಯ , ರವಿಕುಮಾರ್ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದರು. ಪ್ರತಿಭಟನೆಯಲ್ಲಿ ಎಲ್ಲಾ ಪ್ರತಿನಿಧಿಗಳು ಉಪಸ್ಥಿತರಿದ್ದರು.
- Thursday
- November 21st, 2024