Ad Widget

ಪಂಜ: ಆತ್ಮನಿರ್ಭರ ಭಾರತಕ್ಕಾಗಿ ಉದ್ಯೋಗ ನೈಪುಣ್ಯ ತರಬೇತಿ ಶಿಬಿರಕ್ಕೆ ಚಾಲನೆ

ಗ್ರಾಮ ವಿಕಾಸ ಸಮಿತಿ ಮಂಗಳೂರು ವಿಭಾಗ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು, ಸಹಕಾರ ಭಾರತಿ ದ.ಕ ಜಿಲ್ಲೆ, ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜು ಪುತ್ತೂರು, ಪಂಜ ಹಾಗೂ ಏನೆಕಲ್ಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಹಯೋಗದೊಂದಿಗೆ ಉದ್ಯೋಗ ನೈಪುಣ್ಯ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭ ಇಂದು ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.

. . . . . . .


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ಎಸ್.ಅಂಗಾರ ವಹಿಸಿದ್ದರು. ವೇದಿಕೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಂಘಚಾಲಕ ಚಂದ್ರಶೇಖರ ತಳೂರು, ಪಂಜ ದೇವಸ್ಥಾನದ ಆಡಳಿತಾಧಿಕಾರಿಗಳಾದ ದೇವಿಪ್ರಸಾದ್ ಕಾನತ್ತೂರು, ವಿವೇಕಾನಂದ ಪಾಲಿಟೆಕ್ನಿಕ್ ನ ಗೋಪಿನಾಥ್ ಶೆಟ್ಟಿ, ಪಂಜದ ಹಿರಿಯ ವೈದ್ಯರಾದ ಡಾ||ರಾಮಯ್ಯ ಭಟ್ , ಏನೆಕಲ್ಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಭವಾನಿ ಶಂಕರ್, ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಬ್ರಮಣ್ಯ ಕುಳ ಹಾಗೂ
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕರ್ನಾಟಕ ದಕ್ಷಿಣ ಭಾರತ‌ ಸಹಸೇವಾ ಪ್ರಮುಖ್ ನ.ಸೀತಾರಾಮ ಅವರು ಉಪಸ್ಥಿತರಿದ್ದರು. ನ. ಸೀತಾರಾಮ ಆತ್ಮನಿರ್ಭರ ಭಾರತಕ್ಕಾಗಿ ಉದ್ಯೋಗ ನೈಪುಣ್ಯ ತರಬೇತಿ ಶಿಬಿರದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.

ಶಿಬಿರದಲ್ಲಿ ಕೃಷಿ ಯಂತ್ರೋಪಕರಣಗಳ ದುರಸ್ತಿ, ವಿದ್ಯುತ್ ಉಪಕರಣಗಳ ದುರಸ್ತಿ(ಗ್ಯಾಸ್ ಸ್ಟವ್, ಗ್ಯಾಸ್ ಗೀಝರ್ ಸಹಿತ), ಪ್ಲಂಬಿಂಗ್, ಇಲೆಕ್ಟ್ರೀಷಿಯನ್, ಫ್ಯಾಷನ್ ಡಿಸೈನಿಂಗ್, ಪುಡ್ ಟೆಕ್ನಾಲಜಿ, ಕೃಷಿ ಕಸಿ ಕಟ್ಟುವುದು, ಜೇನು ಕೃಷಿ, ಹೈನುಗಾರಿಕೆ, ಕೋಳಿ ಸಾಕಾಣೆ, ಆಡು ಸಾಕಾಣೆ, ಮೊಬೈಲ್ ಫೋನ್ ದುರಸ್ತಿಯ ಬಗ್ಗೆ ಆರು ದಿನಗಳ ತರಬೇತಿ ಶಿಬಿರ ನಡೆಯಲಿದೆ. ಈ ಕಾರ್ಯಕ್ರಮವನ್ನು ಕಾರ್ಯಪ್ಪ ಚಿದ್ಗಲ್ ಸ್ವಾಗತಿಸಿದರು, ಸುಬ್ರಮಣ್ಯ ಕುಳ ವಂದಿಸಿದರು. ಹಾಗೆ ತೀರ್ಥನಂದ ಕೊಡಂಕೇರಿ ನಿರೂಪಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!