ಉದ್ಯೋಗ ನೈಪುಣ್ಯ ತರಬೇತಿಯನ್ನು ಪಡೆದುಕೊಳ್ಳುವುದರಿಂದ ನಾವು ಸ್ವಾಭಿಮಾನಿಗಳಾಗಿ ಬದುಕು ಕಟ್ಟಿಕೊಳ್ಳಬಹುದೆಂದು ಶಾಸಕ ಅಂಗಾರ ಹೇಳಿದರು.
ಅವರು ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ಗ್ರಾಮ ವಿಕಾಸ ಸಮಿತಿ ಮಂಗಳೂರು, ವಿವೇಕಾನಂದ ವಿದ್ಯಾವರ್ದಕ ಸಂಘ ಪುತ್ತೂರು, ಸಹಕಾರ ಭಾರತಿ ದ.ಕ ಜಿಲ್ಲೆ ಹಾಗೂ ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಇದರ ಸಹಯೋಗದಲ್ಲಿ ಇಂದು ನಡೆದ ಉದ್ಯೋಗ ನೈಪುಣ್ಯ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಉದ್ಯೋಗ ನೈಪುಣ್ಯ ತರಬೇತಿ ಶಿಬಿರವನ್ನು ಎಲ್ಲಾರು ಸದುಪಯೋಗಪಡಿಸಿಕೊಂಡು ದೇಶದ ಅಭಿವೃದ್ಧಿಗೆ ಶ್ರಮಿಸಬೇಕೆಂದು ಅವರು ಹೇಳಿದರು.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತ ಸಹಸೇವಾ ಪ್ರಮುಖ್ ನ.ಸೀತರಾಮ ಮಾತನಾಡಿ ಭಾರತ ಮೊದಲು ವಿಶ್ವಗುರುವಾಗಿತ್ತು. ಮತ್ತೆ ಭಾರತ ವಿಶ್ವ ಗುರುವಾಗಲು ಮುಂದಡಿ ಇಡುತ್ತಿದೆ.ಇದಕ್ಕೆ ಎಲ್ಲಾರ ಸಹಕಾರ ಅಗತ್ಯ ಎಂದು ಹೇಳಿದರು.
ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ಸಂಚಾಲಕ ನಿವ್ರತ್ತ ಪ್ರಾಂಶುಪಾಲ ಕೆ.ಆರ್ ಗಂಗಾಧರ ಉದ್ಘಾಟಿಸಿದರು.
ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ, ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಪುಷ್ಪಾಮೇದಪ್ಪ, ಸಹಕಾರ ಭಾರತಿ ದ.ಕ ಜಿಲ್ಲಾ ನಿರ್ದೇಶಕ ಕೃಷ್ಣಪ್ರಸಾದ್ ಮಡ್ತಿಲ, ಪುತ್ತೂರು ವಿವೇಕಾನಂದ ಕಾಲೇಜಿನ ತಾಂತ್ರಿಕ ನಿರ್ದೇಶಕ ಮಹಾದೇವ ಶಾಸ್ತ್ರಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಂಘಚಾಲಕ ಚಂದ್ರಶೇಖರ ತಳೂರು, ಅರಂತೋಡು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಶಿವಾನಂದ ಕುಕ್ಕುಂಬಳ,ಗೋಪಾಲ ಚೆಟ್ಟಿಯಾರ್, ವೆಂಕಟ್ರಮಣ ಹೊಳ್ಳ, ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.