ತುಳುನಾಡಿನ ದೈವಾರಾಧನೆ, ನೇಮೋತ್ಸವ, ಮಾರಿ ಪೂಜೆ, ಮೊದಲಾದ ಧಾರ್ಮಿಕ ಕಾರ್ಯಕ್ಕೆ ಅನುಮತಿ ನೀಡಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸರ್ಕಾರದ ಮುಖ್ಯಕಾರ್ಯದರ್ಶಿಗೆ ಆದೇಶ ನೀಡಿದ್ದಾರೆ.
ಈ ಸಂಬಂಧ ಉಡುಪಿ ಶಾಸಕ ರಘುಪತಿ ಭಟ್ ಈ ಹಿಂದೆ ಮುಖ್ಯಮಂತ್ರಿಯವರಿಗೆ ಮನವಿ ಮಾಡಿದ್ದು, ಈ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು 100 ಜನರ ಮಿತಿಯಲ್ಲಿ ತುಳುನಾಡಿನಲ್ಲಿ ಧಾರ್ಮಿಕ ಕಾರ್ಯ ನಡೆಸಲು ಅನುಮತಿ ನೀಡಿ ಮುಖ್ಯಕಾರ್ಯದರ್ಶಿಯವರಿಗೆ ಆದೇಶಿಸಿದ್ದು, ಈ ಆದೇಶ ಇನ್ನಷ್ಟೇ ಜಾರಿಗೆ ಬರಬೇಕಿದೆ.