ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ವರ್ಚುವಲ್ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ಭಾಗವಹಿಸಿದ ರಾಜ್ಯದ 30 ಸ್ಕೌಟ್ ವಿದ್ಯಾರ್ಥಿಗಳಲ್ಲಿ ಆಳ್ವಾಸ್ ಹಿರಿಯ ಪ್ರಾಥಮಿಕ ಶಾಲೆಯ 7 ನೇ ತರಗತಿ ವಿದ್ಯಾರ್ಥಿ ಸುಳ್ಯದ ಮನುಜ ನೇಹಿಗ ದ್ವಿತೀಯ ಬಹುಮಾನ ಪಡೆದಿರುತ್ತಾನೆ.ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಮುಖ್ಯ ಆಯುಕ್ತರಾದ ಪಿ.ಜಿ.ಆರ್.ಸಿಂಧ್ಯಾರವರು ಬಹುಮಾನ ವಿತರಣೆ ಮಾಡಿದರು.ಪ್ರಸಿದ್ಧ ಗಾಯಕ ಶಶಿಧರ್ ಕೋಟೆ ಉಪಸ್ಥಿತರಿದ್ದರು. ನೇಹಿಗ ರಂಗನಿರ್ದೇಶಕ ಜೀವನ್ ರಾಂ ಸುಳ್ಯ ಮತ್ತು ಪ್ರಾಧ್ಯಾಪಕಿ ಡಾ| ಮೌಲ್ಯ ದಂಪತಿಗಳ ಪುತ್ರನಾಗಿದ್ದಾನೆ.
- Tuesday
- December 3rd, 2024