ರಾಜ್ಯದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಜಲಪ್ರಳಯ ಉಂಟಾಗಿರುವ ಬೆನ್ನಲ್ಲೇ ಮತ್ತೆ ಮಳೆ ಭೀತಿ ಎದುರಾಗಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಪರಿಣಾಮ ಅ.20ರಿಂದ ಮುಂದಿನ 4 ದಿನ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಅ.21ರಂದು ಯೆಲ್ಲೋ ಅರ್ಲಟ್ ಇದ್ದರೆ ಅ.22ರಿಂದ ಮುಂದಿನ 48 ಗಂಟೆ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಆರೆಂಜ್ ಅರ್ಲಟ್ ಘೋಷಿಸಲಾಗಿದೆ._
ದಕ್ಷಿಣ ಒಳನಾಡಿನ ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ಅ.21ರಿಂದ ಮುಂದಿನ 3 ದಿನ ಹಾಗೂ ಶಿವಮೊಗ್ಗದಲ್ಲಿ ಅ.21ರಂದು ಯೆಲ್ಲೋ ಅಲರ್ಟ್ ಇರಲಿದೆ. ಕೆಲ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ನಿರ್ದೇಶಕ ಸಿ.ಎಸ್ಪಾಟೀಲ ಮಾಹಿತಿ ನೀಡಿದ್ದಾರೆ.
- Wednesday
- November 27th, 2024