Ad Widget

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ನಡಿದಿದೆ ಎನ್ನಲಾದ ಅವ್ಯವಹಾರದ ತನಿಖೆಗೆ ಆಗ್ರಹಿಸಿ ಮಾಹಿತಿ ಹಕ್ಕು ಕಾಯ್ದೆಯಡಿಯಲ್ಲಿ ಶ್ರೀನಾಥ್ ಟಿಎಸ್ ದೂರು – ಸೇವೆಯಿಂದ ವಜಾಗೊಳಿಸಿರುವ ಹಿನ್ನೆಲೆ ಸುಳ್ಳು ಆರೋಪ ಎಂದು ರವೀಂದ್ರ ಎಂ.ಎಚ್ ಸ್ಪಷ್ಟನೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿಯ ಮೇಲೆ ದೇವಸ್ಥಾನದ ಆಭರಣಗಳಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಸುಬ್ರಹ್ಮಣ್ಯ ನಿವಾಸಿಯಾದ ಶ್ರೀನಾಥ್ ಟಿ.ಎಸ್. ಅವರು ಮಂಗಳೂರು ಪಶ್ಚಿಮ ವಲಯ ಭ್ರಷ್ಟಾಚಾರ ನಿಗ್ರಹದಳದ ಪೊಲೀಸ್ ಅಧೀಕ್ಷರಲ್ಲಿ ದೂರು ದಾಖಲಿಸಿ, ತನಿಖೆಗೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ದೇವಾಲಯದ ಆಡಳಿತಾಧಿಕಾರಿ ಶ್ರೀಮತಿ ರೂಪಾ ಎಂ.ಜೆ. ಹಾಗೂ ದೇಗುಲದ ಮಾಜಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಎಂ.ಎಚ್. ವಿರುದ್ಧ ತನಿಖೆಗೆ ಒತ್ತಾಯಿಸಲಾಗಿದೆ.
ಧಾರ್ಮಿಕ ದತ್ತಿ ಇಲಾಖೆಯ ಅಧೀನದಲ್ಲಿರುವ ದೇವಸ್ಥಾನದ ಅಧಿಕೃತ ದಾಖಲಾತಿ ಪುಸ್ತಕದಲ್ಲಿ ದಾಖಲಾಗಿರುವ ಕೋಟ್ಯಂತರ ರೂ. ಬೆಲೆ ಬಾಳುವ ವಜ್ರದ ಕಂಠಿಹಾರ, ಆಭರಣಗಳು, ದೇವರ ಫೋಟೊ, ಬೆಳ್ಳಿಯ ಒಡವೆಗಳು, ಪುರಾತನ ಕಾಲದ ವಿಗ್ರಹಗಳು ನಾಪತ್ತೆಯಾಗಿದ್ದವು. ಈ ಬಗ್ಗೆ ದೇವಾಲಯದ ಮಾಜಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರವೀಂದ್ರ ಎಂ.ಎಚ್. ಅವರಿಗೆ ಮಾಹಿತಿ ಕೋರಿ ಅರ್ಜಿ ಸಲ್ಲಿಸಿದ್ದರೂ, ಯಾವುದೇ ಮಾಹಿತಿ ದೊರಕಿಲ್ಲ ಎಂದು ಅವರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಸಮಿತಿಯ ನಿರ್ದೇಶಕರಾಗಿರುವು ಶ್ರೀನಾಥ್ ಟಿ.ಎಸ್. ಅವರು ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಕೋರಿದ್ದರೂ, ಆಡಳಿತಾಧಿಕಾರಿಯಾಗಲೀ, ಕಾರ್ಯ ನಿರ್ವಹಣಾಧಿಕಾರಿ ಯಾಗಲೀ ಯಾವುದೇ ಮಾಹಿತಿ ನೀಡಿಲ್ಲ ಎನ್ನಲಾಗಿದೆ. ಹೀಗಾಗಿ ತನಿಖೆಗೆ ಒತ್ತಾಯಿಸಿ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.
ಇವರು ದೇವಸ್ಥಾನದ ಭಕ್ತರ ಹಿತರಕ್ಷಣಾ ವೇದಿಕೆ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

. . . . . . . . .
ದೂರುದಾರ ಶ್ರೀನಾಥ್

ಈ ಘಟನೆಯ ಕುರಿತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ರವರನ್ನು ಅಮರ ಸುದ್ದಿ ಪತ್ರಿಕೆ ವತಿಯಿಂದ ಸಂಪರ್ಕಿಸಿದಾಗ ವಿನಾಕಾರಣ ನನ್ನ ಮೇಲೆ ಆರೋಪವನ್ನು ಶ್ರೀನಾಥ್ ಟಿಎಸ್ ಅವರು ಮಾಡುತ್ತಿದ್ದಾರೆ. ಅವರು ಈ ಮೊದಲು ದೇವಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಕಾರಣಾಂತರಗಳಿಂದ ಅವರನ್ನು ಸೇವೆಯಿಂದ ವಜಾಗೊಳಿಸಿರುವ ಹಿನ್ನೆಲೆಯಲ್ಲಿ ಕೋಪದಿಂದ ನಮ್ಮ ಮೇಲೆ ದ್ವೇಷವನ್ನು ಸಾಧಿಸುತ್ತಿದ್ದಾರೆ. ನಾವು ಯಾವುದೇ ರೀತಿಯ ತನಿಖೆಗೆ ಸಿದ್ದರಿದ್ದೇವೆ ಎಂದು ಅವರು ಹೇಳಿದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading