
ಸುಳ್ಯ:- ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರಕಾರ ಜಾರಿಗೊಳಿಸಿದ ಸ್ವತಂತ್ರ ಭಾರತದ ಅತ್ಯಂತ ಕರಾಳ ಕೃಷಿ ಕಾನೂನಿನ ವಿರುದ್ಧವಾಗಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ದೇಶವ್ಯಾಪಿ ಅಕ್ಟೋಬರ್ ತಿಂಗಳಿನಲ್ಲಿ “ಜಾಗೋ ಕಿಸಾನ್” ಕೃಷಿ ಸಂಹಾರ ಬಿಜೆಪಿಯ ಹುನ್ನಾರ ಎಂಬ ಹೆಸರಿನಲ್ಲಿ ಅಭಿಯಾನ ಕೈಗೊಂಡಿದ್ದು ಇದರ ಭಾಗವಾಗಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾಧ್ಯಂತ ಬಿತ್ತಿಪತ್ರ ಅಂಟಿಸುವುದು,ಕರಪತ್ರ ವಿತರಣೆ, ರೈತ ಮತ್ತು ಸಮಾನಮನಸ್ಕ ಸಂಘಟನೆಗಳ ನಾಯಕರೊಂದಿಗೆ ಸಮಾಲೋಚನಾ ಸಭೆ, ಪಾದಯಾತ್ರೆ,ಕಾರ್ನರ್ ಮೀಟ್,ಮಾನವ ಸರಪಳಿ ಈ ರೀತಿಯ ವಿವಿಧ ಕಾರ್ಯಕ್ರಮಗಳ ಮೂಲಕ ಈ ಅಭಿಯಾನವನ್ನು ನಡೆಸಲಿದೆ ಮತ್ತು ಇದರ ಅಂಗವಾಗಿ ಎಸ್.ಡಿ.ಪಿ.ಐ ಸುಳ್ಯ ವಿಧಾನಸಭಾ ಕ್ಷೇತ್ರದ ವತಿಯಿಂದ ದಿನಾಂಕ 27/10/2020 ಮಂಗಳವಾರ ಬೆಳಿಗ್ಗೆ 10.30 ಕ್ಕೆ ಸುಳ್ಯ ಜ್ಯೋತಿ ಸರ್ಕಲ್ ನಿಂದ ಗಾಂಧಿನಗರದ ಮೂಲಕ ಸಾಗಿ ಹಳೇ ಬಸ್ ನಿಲ್ದಾಣದ ಬಳಿ ಬೃಹತ್ ಪ್ರತಿಭಟನಾ ಸಭೆಯು ನಡೆಯಲಿದೆ ಎಂದು ಎಸ್.ಡಿ.ಪಿ.ಐ ಸುಳ್ಯ ವಿಧಾನಸಭಾ ಕ್ಷೇತ್ರಾದ್ಯಕ್ಷ ಅಬ್ದುಲ್ ಕಲಾಂ ಸುಳ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ..