ಖ್ಯಾತ ದಂತ ವೈದ್ಯರು, ವೈದ್ಯ ಸಾಹಿತಿ ಡಾ. ಮುರಲೀ ಮೋಹನ ಚೂಂತಾರು ಅವರು ವೃತ್ತಿಯ ಜತೆಗೆ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಿರುವ ಅನುಪಮ ಸೇವೆಯನ್ನು ಗುರುತಿಸಿ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯವು ಕರ್ನಾಟಕ ರಾಜ್ಯೋತ್ಸವ ಸಂದರ್ಭದಲ್ಲಿ ಅವರನ್ನು ಗೌರವಿಸಲು ತೀರ್ಮಾನಿಸಿದೆ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ. ಎಸ್. ಸಚ್ಚಿದಾನಂದ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿವಿಯ ಧನ್ವಂತರಿ ಸಭಾಂಗಣದಲ್ಲಿ ನವೆಂಬರ್ 5ರಂದು ಗುರುವಾರ ನಡೆಯುವ ಸಮಾರಂಭದಲ್ಲಿ ಈ ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ರಾಜ್ಯ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಕೆ. ಸುಧಾಕರ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಅವರು ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.