ಗುತ್ತಿಗಾರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ನೂತನ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ ನ.27 ರಂದು ನಡೆಯಿತು.
ಕೊಠಡಿಗಳ ಉದ್ಘಾಟನೆಯನ್ನು ಶಾಸಕ ಎಸ್ ಅಂಗಾರ ನೆರವೇರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು “ಜನರ ಸಹಕಾರ ಇದ್ದರೆ ಯೋಜನೆ ಸರಿಯಾಸ ರೀತಿಯಲ್ಲಿ ಆಗುತ್ತದೆ, ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಯೋಚನೆ ಉತ್ತಮ ಹಾಗೂ ಯೋಜನೆಗಳ ಅನುಷ್ಠಾನಕ್ಕೆ ಪೂರಕವಾದ ವ್ಯವಸ್ಥೆಯ ಜೊತೆಗೆ ಸರ್ಕಾರದ ಅನುದಾನ ಬಂದಾಗ ಅಭಿವೃದ್ಧಿ ಕಾರ್ಯಗಳು ಸಾಧ್ಯ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಮತಿ ಆಶಾತಿಮ್ಮಪ್ಪ, ಜಿಲ್ಲಾ ಪಂಚಾಯತ್ ಸದಸ್ಯರಾದ ಹರೀಶ್.ಕಂಜಿಪಿಲಿ, ತಾಲೂಕು ಪಂಚಾಯತ್ ಸದಸ್ಯರಾದ, ಯಶೋಧ ಬಾಳೆಗುಡ್ಡೆ, ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ವೀಣಾ.ಎಂ.ಟಿ, ಇಂಜಿನಿಯರ್ ಅಭಿಯಂತರ ಹನುಮಂತರಾಯಪ್ಪ, ಮಾಜಿ ಗ್ರಾ.ಪಂ.ಅಧ್ಯಕ್ಷ ವೆಂಕಟ್ ವಳಲಂಬೆ, ಮಾಜಿ ತಾ.ಪಂ.ಸದಸ್ಯ ಮುಳಿಯ ಕೇಶವ ಭಟ್, ಗುತ್ತಿಗಾರು ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಸಂತೋಷ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಚೆನ್ನಮ್ಮ, ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಹೆರಾಲ್ಡ್ ನೆಲ್ಸನ್ ಉಪಸ್ಥಿತರಿದ್ದರು.
ಮುಖ್ಯೋಪಾಧ್ಯಾಯರಾದ ಹೆರಾಲ್ಡ್ ನೆಲ್ಸನ್ ಸ್ವಾಗತಿಸಿ, ಎಸ್.ಡಿ.ಯಂ.ಸಿ ಅಧ್ಯಕ್ಷರಾದ ಲೊಕೇಶ್ವರ ಡಿ.ಆರ್ ವಂದಿಸಿದರು. ಪ್ರಸನ್ನ ವೈ.ಬಿ. ಕಾರ್ಯಕ್ರಮ ನಿರೂಪಿಸಿದರು.