ಮೆಟ್ಟಿನಡ್ಕದ ಶ್ರೀ ದುರ್ಗಾ ಪರಮೇಶ್ವರಿ ಜ್ಞಾನ ವಿಕಾಸ ಕೇಂದ್ರದ ವತಿಯಿಂದ ವಿಶ್ವ ಮಧುಮೇಹ ದಿನಾಚರಣೆ ಕಾರ್ಯಕ್ರಮ ನ.27 ರಂದು ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ವಲಯ ತರಬೇತುದಾರರಾದ ಎನ್ನೆಂಸಿಯ ಕನ್ನಡ ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿ ಆಗಮಿಸಿ ಮಾತನಾಡಿದರು. ನಮ್ಮ ಜೀವನ ಇಂದು ಒತ್ತಡದ ಬದುಕಾಗಿದೆ.ಇದರಿಂದ ಹೊರಬಂದಾಗ ಮಾತ್ರ ನಮ್ಮ ಆರೋಗ್ಯ ಉತ್ತಮವಾಗಿರಲು ಸಾಧ್ಯ ಎಂದರು.
ಜ್ಞಾನ ವಿಕಾಸ ಕೇಂದ್ರದ ಸದಸ್ಯೆ ಸುಶೀಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಜ್ಞಾನ ವಿಕಾಸ ಸಮನ್ವಯಾಧಿಕಾರಿ ಭಾರತಿ ಎಂ, ಮೆಟ್ಟಿನಡ್ಕ ಸೇವಾ ಪ್ರತಿನಿಧಿ ಅಶ್ವಿನಿ, ಮೆಟ್ಟಿನಡ್ಕ ಒಕ್ಕೂಟದ ಅಧ್ಯಕ್ಷೆ ಜಯಂತಿ, ಕೇಂದ್ರದ ಸದಸ್ಯೆ ಚಂದ್ರಾವತಿ ಪೂಜಾರಿಕೋಡಿ ಮೊದಲಾದವರು ಉಪಸ್ಥಿತರಿದ್ದರು.