ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿ ಪ್ರೇಮ್ ಸಿಂಗ್ ಅವರನ್ನು ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಅವರು ಅಮಾನತು ಮಾಡಿ ಆದೇಶ ಹೊರಡಿಸಿದ್ದು ಕಡಬ ತಾಲೂಕಿನ ಐತ್ತೂರು ಗ್ರಾಮ ಪಂಚಾಯತ್ ನಲ್ಲಿ ಪಿಡಿಓ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಸಂದರ್ಭದ ಪ್ರಕರಣವೊಂದಕ್ಕೆ ಸಂಬಂಧಿಸಿ ಲೋಕಾಯುಕ್ತ ತನಿಖೆ ನಡೆದಿತ್ತು. ಇದೀಗ ತನಿಖೆ ನಡೆದು ಅಮಾನತು ಆದೇಶ ಮಾಡಿದ್ದಾರೆ ತಿಳಿದು ಬಂದಿದೆ. ರವಿಚಂದ್ರ ಅವರನ್ನು ಹರಿಹರಪಲ್ಲತ್ತಡ್ಕ ಗ್ರಾಮ ಪಂಚಾಯತ್ ಗೆ ಪ್ರಭಾರ ಪಿಡಿಓ ಆಗಿ ನೇಮಕ ಮಾಡಲಾಗಿದೆ.