ಬೆಳ್ಳಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯ 3ನೇ ವಾರ್ಡ್ ನ ತಡಗಜೆ ಗ್ರಾಮಸ್ಥರು ಜನಪ್ರತಿನಿಧಿಗಳ ನಿರ್ಲಕ್ಷ್ಯ ಧೋರಣೆಗೆ ಬೇಸತ್ತು ಚುನಾವಣಾ ಬಹಿಷ್ಕಾರದ ಮೊರೆಹೋಗಿದ್ದಾರೆ. ಈ ವಾರ್ಡಿನಲ್ಲಿ ಸುಮಾರು 25 ವರ್ಷಗಳಿಂದ ಪ್ರಮುಖ ಮೂಲಭೂತ ಬೇಡಿಕೆಗಳಾದ ರಸ್ತೆ, ಚರಂಡಿ, ಕುಡಿಯುವ ನೀರು ಇತ್ಯಾದಿ ಸಮಸ್ಯೆಗಳಿದ್ದರೂ ಇಲ್ಲಿನ ಪಂಚಾಯತ್ ಸದಸ್ಯರಿಂದ ಹಿಡಿದು ವಿಧಾನಸಭಾ ಸದಸ್ಯರವರೆಗೆ ಕೇವಲ ಭರವಸೆಯಲ್ಲದೇ, ಸೂಕ್ತ ಸ್ಪಂದನೆ ದೊರೆಯದಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.
ಈ ನಿಟ್ಟಿನಲ್ಲಿ ನೊಂದ ತಡಗಜೆ ಗ್ರಾಮಸ್ಥರು ಈ ಬಾರಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಅಳವಡಿಸಿದ್ದು, ಇನ್ನಾದರೂ ಆಧಿಕಾರಿಗಳು ಸೂಕ್ತ ಸ್ಪಂದನೆ ನೀಡಬೇಕಾದ ಅನಿವಾರ್ಯತೆ ಇದೆ.