ಸುಳ್ಯ ತಾಲೂಕು ನವೋದಯ ಸ್ವ ಸಹಾಯ ಸಂಘಗಳ ಪ್ರೇರಕರ ಪ್ರಗತಿ ಪರಿಶೀಲನಾ ಸಭೆಯು ಸುಳ್ಯದ ಸಿ ಎ ಬ್ಯಾಂಕ್ ಸಭಾಂಗಣದಲ್ಲಿ ಡಿ.8 ರಂದು ನಡೆಯಿತು.
ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಶಶಿಕುಮಾರ್ ಬಾಲ್ಯೊಟ್ಟು ಉಪಸ್ಥಿತರಿದ್ದು ಪ್ರಗತಿ ಪರಿಶೀಲನೆ ನಡೆಸಿ ಸ್ವ ಸಹಾಯ ಸಂಘಗಳಿಗೆ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.
ವೇದಿಕೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಸ್ವ ಸಹಾಯ ಸಂಘಗಳ ನೋಡಲ್ ಅಧಿಕಾರಿ ಪದ್ಮನಾಭ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಸ್ವ ಸಹಾಯ ಗುಂಪು ದಳದ ಮೇಲ್ವಿಚಾರಕರಾದ ರಂಜಿತ್ ಕುಮಾರ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವಲಯ ಮೇಲ್ವಿಚಾರಕರಾದ ಬಾಲಕೃಷ್ಣ ಪುತ್ಯ, ನವೋದಯ ಸ್ವ ಸಹಾಯ ಸಂಘಗಳ ತಾಲೂಕು ಮೇಲ್ವಿಚಾರಕರಾದ ತಿಮ್ಮಪ್ಪ ಗೌಡ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸುಳ್ಯ ವಲಯ ಪ್ರೇರಕರಾದ ಶ್ರೀಧರ ಮಾಣಿಮರ್ಧು ಸ್ವಾಗತಿಸಿ, ಗುತ್ತಿಗಾರು ವಲಯ ಪ್ರೇರಕರಾದ ದಾಮೋದರ ಮೀನಾಜೆ ವಂದಿಸಿದರು.