ಗ್ರಾಮ ಪಂಚಾಯತ್ ಚುನಾವಣೆಯ ಮತದಾನ ಬಗೆಗಿನ ಕ್ಷಣಕ್ಷಣದ ಮಾಹಿತಿಯನ್ನು ಸಿಬ್ಬಂದಿಗಳು ವೆಬ್ಸೈಟ್ ಅಪ್ ಲೋಡ್ ಮಾಡಬೇಕಾಗಿರುವುದರಿಂದ ನೆಟ್ವರ್ಕ್ ಸಮಸ್ಯೆ ಹಲವಾರು ಪಂಚಾಯತ್ ಸಿಬ್ಬಂದಿಗಳನ್ನು ಕಾಡಲಾರಂಭಿಸಿದೆ. ಪ್ರತಿ ಬೂತ್ ಮಟ್ಟದಲ್ಲಿ ಮತದಾನ ಪ್ರಕ್ರಿಯೆಯ ಪರ್ಸಂಟೇಜ್ ನ್ನು ಪ್ರತಿ 2 ಗಂಟೆಗೊಮ್ಮೆ ರಾಜ್ಯ ಚುನಾವಣಾ ಆಯೋಗದ ವೆಬ್ ಸೈಟ್ ಗೆ ಅಪ್ ಡೇಟ್ ಮಾಡಬೇಕಾಗುತ್ತದೆ. ಇದೀಗ ನೆಟ್ವರ್ಕ್ ಸಮಸ್ಯೆಯಿಂದ ಅಪ್ ಡೇಟ್ ಮಾಡಲು ಹರಸಾಹಸ ಮಾಡುತ್ತಿದ್ದಾರೆ. ಈ ಬಗ್ಗೆ ಮೇಲಾಧಿಕಾರಿಗಳಿಗೆ ಮನವಿ ಮಾಡಿದ್ದರೂ ಕ್ರಮ ಕೈಗೊಂಡಿಲ್ಲ ಎಂದು ಸಿಬ್ಬಂದಿಗಳು ತಿಳಿಸಿದ್ದಾರೆ. ಬಿಎಸ್ ಎನ್ ಎಲ್ ನೆಟ್ವರ್ಕ್ ಅನ್ನು ನಂಬಿರುವ ಪಂಚಾಯತ್ ಗಳಿಗೆ ಅಧಿಕಾರಿಗಳು ಪರ್ಯಾಯ ವ್ಯವಸ್ಥೆ ಮಾಡಬೇಕಾಗಿದೆ.
- Saturday
- November 23rd, 2024