ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ಚುನಾವಣಾ ಸಾಕ್ಷರತಾ ಕ್ಲಬ್ ನ ವತಿಯಿಂದ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದಲ್ಲಿ ನಡೆಸಲಾದ ವಿವಿಧ ಸ್ಪರ್ಧೆಗಳಲ್ಲಿ ಸರಕಾರಿ ಪ್ರೌಢಶಾಲೆ ಎಣ್ಮೂರು ಇಲ್ಲಿನ ವಿದ್ಯಾರ್ಥಿಗಳು ಹಲವು ಬಹುಮಾನಗಳನ್ನು ಪಡೆದುಕೊಂಡಿದ್ದಾರೆ.
ಪ್ರಬಂಧ ಸ್ಪರ್ಧೆಯಲ್ಲಿ ರೇಣುಕಾ (10ನೇ ತರಗತಿ) ಪ್ರಥಮ ಸ್ಥಾನ ಪಡೆದುಕೊಂಡರೆ, ಭಿತ್ತಿಚಿತ್ರ ರಚನೆಯಲ್ಲಿ ರೋಷನ್ (10 ನೇ ತರಗತಿ) ದ್ವಿತೀಯ ಸ್ಥಾನ, ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರತಿಕ್ಷಾ ಜಿ ಶೆಟ್ಟಿ ಮತ್ತು ರಕ್ಷಾ (10ನೇ ತರಗತಿ) ಪ್ರಥಮ ಸ್ಥಾನ ಹಾಗೂ ಇಂಗ್ಲಿಷ್ ಪ್ರಬಂಧ ಸ್ಪರ್ಧೆಯಲ್ಲಿ ಸೌದಾತ್ ತೃತೀಯ ಸ್ಥಾನ ಪಡೆದುಕೊಂಡಿರುತ್ತಾರೆ.