Ad Widget

ಪಾಣತ್ತೂರು: ಖಾಸಗಿ ಬಸ್ ಪಲ್ಟಿ – ಮದುವೆಯ ಬೀಗರ ಊಟಕ್ಕೆ ತೆರಳುತ್ತಿದ್ದ ಏಳು ಮಂದಿ ದುರ್ಮರಣ – ಸುಳ್ಯದ ವ್ಯಕ್ತಿ ಮೃತ್ಯು


ಸುಳ್ಯದಿಂದ ಪಾಣತ್ತೂರು ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸೊಂದು ಪಲ್ಟಿಯಾದ ಪರಿಣಾಮ ಏಳು ಜನರು ದುರ್ಮರಣಕ್ಕೀಡಾದ ಘಟನೆ ಇಂದು ನಡೆದಿದೆ. ಹಲವಾರು ಜನರಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದುಬಂದಿದೆ.
ಕೇರಳ ಕರ್ನಾಟಕ ಗಡಿಯ ಪಾಣತ್ತೂರು ಸಮೀಪದ ಗಡಿಗುಡ್ಡೆ ಎಂಬಲ್ಲಿ ನಡೆದಿದೆ.

. . . . . . . . .

ಪುತ್ತೂರಿನ ಖಾಸಗಿ ಬಸ್ ಮದುವೆ ಸಮಾರಂಭಕ್ಕೆಂದು ಜನರನ್ನು ಕರೆದೊಯ್ಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈಶ್ವರಮಂಗಲದಿಂದ ಕರಿಕೆಗೆ ಮದುವೆ ದಿಬ್ಬಣ ಹೊರಟಿತ್ತು. ಬಸ್ಸಿನಲ್ಲಿ ಸುಮಾರು 60 ಜನರಿದ್ದರು. ಬಸ್ಸು ಪಲ್ಟಿಯಾಗಿ ಮನೆಯೊಂದರ ಮೇಲೆ ಬಿದ್ದಿದೆ. ಘಟನೆಯಲ್ಲಿ ಹಲವರು ಗಂಭೀರ ಗಾಯಗೊಂಡಿದ್ದು, ಕೆಲವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಕಾಞಂಗಾಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟವರಲ್ಲಿ ಸುಳ್ಯದವರು ಕೂಡ ಇದ್ದಾರೆ. ಮೃತಪಟ್ಟವರಲ್ಲಿ ಮಕ್ಕಳು ಕೂಡಾ ಸೇರಿದ್ದಾರೆ ಎಂದು ತಿಳಿದುಬಂದಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading