Ad Widget

ಜ.25 : ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ನ. ಪಂ.ಎದುರು ಪ್ರತಿಭಟನೆಗೆ ಸಿದ್ಧತೆ


ಸುಳ್ಯ ತಾಲೂಕು ನಗರ ಪಂಚಾಯಿತ್ ವ್ಯಾಪ್ತಿಗೆ ಸಂಬಂಧಪಟ್ಟ ಗಾಂಧಿನಗರದಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ವ್ಯಾಪಾರಕ್ಕೆ ಮೀಸಲಿರಿಸಿದ ವಾಣಿಜ್ಯ ಕಟ್ಟಡವನ್ನು ದಲಿತರಿಗೆ ವಂಚಿಸಿ ಮೇಲ್ವರ್ಗದ ಜನರು ವ್ಯಾಪಾರ ನಡೆಸಿಕೊಂಡು ಬಂದಿದ್ದಾರೆ. ಈ ಬಗ್ಗೆ ಅಂಬೇಡ್ಕರ್ ರಕ್ಷಣಾ ವೇದಿಕೆಯವರು ಈ ಮೊದಲು ನಗರ ಪಂಚಾಯಿತಿಗೆ ದೂರನ್ನು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ ನಗರ ಪಂಚಾಯತ್ ಮುಂಬಾಗದಲ್ಲಿ ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ಜ.25 ರಂದು ಉಗ್ರ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ಸಂಘಟನೆಯ ಪದಾಧಿಕಾರಿಗಳು ಹಾಗೂ ದಲಿತ ಸಮುದಾಯ ಭಾಗವಹಿಸಲಿದೆ ಎಂದು ಅಂಬೇಡ್ಕರ್ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಪಿ ಸುಂದರ ಪಾಟಾಜೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.

. . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!