ಐನೆಕಿದು ಬಿಜೆಪಿ ಗ್ರಾಮ ಸಮಿತಿ ವತಿಯಿಂದ ನೂತನ ಸಚಿವರಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಶಾಸಕ ಎಸ್ ಅಂಗಾರ ಅವರನ್ನು ಸುಬ್ರಹ್ಮಣ್ಯದಲ್ಲಿ ಭೇಟಿಯಾಗಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಐನೆಕಿದು ಗ್ರಾಮ ಸಮಿತಿ ಅಧ್ಯಕ್ಷ ಕಿರಣ್ ಪೈಲಾಜೆ, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯರಾದ ಗಿರೀಶ್ ಪೈಲಾಜೆ , ಐನೆಕಿದು- ಸುಬ್ರಹ್ಮಣ್ಯ ಸಿ.ಎ ಬ್ಯಾಂಕ್ ಅಧ್ಯಕ್ಷ ಜಯಪ್ರಕಾಶ್ ಕೂಜುಗೋಡು, ಅಜಿತ್ ಕಲ್ಲೇರಿ, ಯಶವಂತ್ ಕೊಪ್ಪಳಗದ್ದೆ, ಲಕ್ಮೀಶ್ ಇಜಿನಡ್ಕ, ಆಕಾಶ್ ಕೂಜುಗೋಡು ಉಪಸ್ಥಿತರಿದ್ದರು.
✍ವರದಿ:-ಉಲ್ಲಾಸ್ ಕಜ್ಜೋಡಿ
- Friday
- November 22nd, 2024