Ad Widget

ಜ್ಞಾನಮಂದಾರ ಅಕಾಡೆಮಿಯಿಂದ ಸುಳ್ಯದಲ್ಲಿ ಕನ್ನಡ ಕಲಾ ಪ್ರತಿಭೋತ್ಸವ – ಸಾಧಕರಿಗೆ “ಸಮಾಜ ರತ್ನ ರಾಜ್ಯ ಪ್ರಶಸ್ತಿ” ಪ್ರದಾನ

ಶ್ರೀ ಜ್ಞಾನ ಮಂದಾರ ಟ್ರಸ್ಟ್ ಬೆಂಗಳೂರು ಕಳೆದ ಹಲವು ವರ್ಷಗಳಿಂದ ವಿವಿಧ ಸಾಧಕರನ್ನು ಗೌರವಿಸುವ ಸಲುವಾಗಿ ಸಮಾಜರತ್ನ ರಾಜ್ಯ ಪ್ರಶಸ್ತಿಯನ್ನು ನೀಡುತ್ತಿದ್ದು, ಈ ಬಾರಿಯ ಸಮಾಜರತ್ನ ರಾಜ್ಯ ಪ್ರಶಸ್ತಿ ಪ್ರದಾನ ಹಾಗೂ ಕನ್ನಡ ಕಲಾ ಪ್ರತಿಭೋತ್ಸವ ಕಾರ್ಯಕ್ರಮವು ಜ.17 ರಂದು ಸುಳ್ಯದ ಕೇರ್ಪಳ ಶ್ರೀ ದುರ್ಗಾಪರಮೇಶ್ವರಿ ಕಲಾಮಂದಿರದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ನ ಅಧ್ಯಕ್ಷರಾದ ಡಾ| ಕೆ.ವಿ.ಚಿದಾನಂದ ಉದ್ಘಾಟಿಸಿದರು.

. . . . . . .

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜ್ಞಾನಮಂದಾರ ಅಕಾಡೆಮಿಯ ಮಹಾಪೋಷಕರಾದ ಧರ್ಮದರ್ಶಿ ಹರಿಕೃಷ್ಣ ಪುನರೂರು ವಹಿಸಿದ್ದರು. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ|ಪಿ.ಎಸ್.ಯಡಿಪಡಿತ್ತಾಯರವರು ಪೇಜಾವರ ಶ್ರೀ ಸ್ಮರಣ ಸಂಚಿಕೆ ಬಿಡುಗಡೆ ಹಾಗೂ ಸಮಾಜರತ್ನ ಪ್ರಶಸ್ತಿ ಪ್ರದಾನವನ್ನು ನೆರವೇರಿಸಿದರು. ಟ್ರಸ್ಟ್‌ನ ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕಿಯರ ತರಬೇತಿ ಸಂಸ್ಥೆಯಲ್ಲಿ ತರಬೇತಿ ಪಡೆದ ಶಿಕ್ಷಕಿಯರಿಗೆ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ನ ಅಧ್ಯಕ್ಷರಾದ ಡಾ| ಕೆ.ವಿ.ಚಿದಾನಂದ ಅಂಕಪಟ್ಟಿ ವಿತರಿಸಿದರು. ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಕರ್ನಾಟಕ ಚೇತನ ಪುರಸ್ಕಾರವನ್ನು ಮಹಾರಾಷ್ಟ್ರ ಉಚ್ಚನ್ಯಾಯಾಲಯದ ಹಿರಿಯ ನ್ಯಾಯವಾದಿ ಮೋರ್ಲಾ ರತ್ನಾಕರ ಶೆಟ್ಟಿ ನೀಡಿದರು. ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾ ಮಂಡಲದ ಸಲಹೆಗಾರರಾದ ಕೆ.ಎಸ್ ಗುರುಪ್ರಸಾದ್ ಅರಳುಮಲ್ಲಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಕಾರ್ಯಕ್ರಮದಲ್ಲಿ ತುಮಕೂರಿನ ಪ್ರೊ| ಬಿ.ವಿ. ರವಿಶಂಕರ್ ರವರಿಗೆ ‘ಸಿದ್ಧಗಂಗಾಶ್ರೀ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಇದೇ ಸಂದರ್ಭದಲ್ಲಿ ಅಮೇರಿಕಾದ ‘ಐಸ್ಟೀನ್’ ವಿಶ್ವವಿದ್ಯಾನಿಲಯದಿಂದ 2 ವರ್ಷಗಳ ಹಿಂದೆ ಗೌರವ ಡಾಕ್ಟರೇಟ್ ಗೆ ಆಯ್ಕೆಯಾಗಿದ್ದು, ಕೋವಿಡ್ ನಿಬಂಧನೆಯ ಹಿನ್ನೆಲೆಯಿಂದ ತೆರಳಲು ಅಸಾಧ್ಯವಾಗಿದ್ದ ಮಂಗಳೂರಿನ ಪ್ರತಿಷ್ಠಿತ ಸ್ವರ್ಣೋದ್ಯಮಿ ಸನ್ಮಾನ್ಯ ಶ್ರೀ ರಮೇಶ್ ಕೃಷ್ಣ ಶೇಟ್ ರವರಿಗೆ ಗೌರವ ಡಾಕ್ಟರೇಟ್ ಪ್ರದಾನಿಸಲಾಯಿತು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಜ್ಞಾನಮಂದಾರ ಟ್ರಸ್ಟ್‌ನ ವತಿಯಿಂದ ‘ಸಮಾಜರತ್ನ ರಾಜ್ಯ ಪ್ರಶಸ್ತಿ’ ಪ್ರದಾನ ಮಾಡಲಾಗುತ್ತಿದ್ದು, ಸುಳ್ಯದ ಹಿರಿಯ ಸಹಕಾರಿ ಧುರೀಣ ಪಿ.ಸಿ.ಜಯರಾಮ, ವೆಂಕಟ್ರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥ, ಕೆವಿಜಿ ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ| ಲೀಲಾಧರ್ ಡಿ.ವಿ., ಉದ್ಯಮಿ ಕೆ.ಎಸ್. ಕರೋಡಿ ಗೋಪಾಲಕೃಷ್ಣ, ಮಹಾರಾಷ್ಟ್ರ ಉಚ್ಚನ್ಯಾಯಾಲಯದ ಹಿರಿಯ ನ್ಯಾಯವಾದಿ ಸುಭಾಷ್.ಬಿ ಶೆಟ್ಟಿ, ಟಿ. ಕುಮರೇಶನ್ ಹಾಗೂ ಎನ್.ಕುಮಾರ್ ಇವರುಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಇದೇ ಸಂದರ್ಭದಲ್ಲಿ ದಿವ್ಯ ಸಾಗರ ಶಿಕ್ಷಣ ಫೌಂಢೇಶನ್ ಮತ್ತು ಜ್ಞಾನಮಂದಾರ ಶಿಕ್ಷಣ ಸಂಸ್ಥೆಯ ದಾನಿಗಳಾದ ಮುಂಬೈನ ಸಮಾಜರತ್ನ ದಿವಾಕರ ಎನ್.ಶೆಟ್ಟಿ ಕಾಯಕಯೋಗಿ ಡಾ| ಆರ್.ಎನ್ ಶೆಟ್ಟಿಯವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. ಇದೇ ಕಾರ್ಯಕ್ರಮದಲ್ಲಿ ಜ್ಞಾನಮಂದಾರ ಅಕಾಡೆಮಿಯ ಸಂಸ್ಥಾಪಕರಾದ ಸೋಮಶೇಖರ್ ರವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಜ್ಞಾನಮಂದಾರ ಸಂಸ್ಥೆಯ ವಿದ್ಯಾರ್ಥಿನಿ ಶುಭದಾ ಪ್ರಾರ್ಥಿಸಿದರು. ಜ್ಞಾನಮಂದಾರ ಟ್ರಸ್ಟ್ ನ ಐ.ಸಿ. ಕೈಲಾಸ್ ಸ್ವಾಗತಿಸಿ, ಶಿಕ್ಷಕಿ ಹೇಮಾ ಗಣೇಶ್ ಕಜೆಗದ್ದೆ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಜ್ಞಾನಮಂದಾರ ಸಂಸ್ಥೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!