ಗ್ರಾಮ ಪಂಚಾಯತ್ ಚುನಾವಣೆ ಬಳಿಕ ಅಧ್ಯಕ್ಷ ಉಪಾಧ್ಯಕ್ಷರ ಹುದ್ದೆಗಳ ಮೀಸಲಾತಿ ನಿಗದಿಪಡಿಸಲು ಈ ಹಿಂದೆ ನಿಗದಿಪಡಿಸಲಾಗಿದ್ದ ಸ್ಥಳ ಮತ್ತು ದಿನಾಂಕ ಬದಲಾವಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಸುಳ್ಯ ಹಾಗೂ ಕಡಬ ತಾಲೂಕಿನ ಮೀಸಲಾತಿ ಪ್ರಕ್ರಿಯೆ ಜಿಲ್ಲಾ ಪಂಚಾಯಿತ್ ಸಭಾಂಗಣದಲ್ಲಿ ಜ.23 ರಂದು ಆಯೋಜಿಸಿ ಜಿಲ್ಲಾಧಿಕಾರಿ ಆದೇಶ ನೀಡಿದ್ದರು. ಇದಕ್ಕೆ ಜನಪ್ರತಿನಿಧಿ ಹಾಗೂ ಪಕ್ಷಗಳಿಂದ ವಿರೋಧ ವ್ಯಕ್ತವಾಗಿ ಈ ಹಿಂದಿನಂತೆ ಮೀಸಲಾತಿ ಪ್ರಕ್ರಿಯೆ ಆಯಾ ತಾಲೂಕುಗಳಲ್ಲಿ ಮಾಡಬೇಕೆಂಬ ಒತ್ತಾಯ ಕೇಳಿಬಂದಿತ್ತು. ಈ ಹಿನ್ನಲೆಯಲ್ಲಿ ಮೀಸಲಾತಿ ಪ್ರಕ್ರಿಯೆ ಮಂಗಳೂರಿನ ಬದಲು ಪುತ್ತೂರು ಪುರಭವನಕ್ಕೆ ಸ್ಥಳಾಂತರ ಮಾಡಿದ್ದಾರೆ. ಸುಳ್ಯ ತಾಲೂಕಿನ ಮೀಸಲಾತಿ ನಿಗದಿ ಜ.27ರಂದು ಅಪರಾಹ್ನ 3 ಕ್ಕೆ ಹಾಗೂ 28 ರಂದು ಬೆಳಗ್ಗೆ 10.30ಕ್ಕೆ ಕಡಬ ತಾಲೂಕಿನ ಗ್ರಾ.ಪಂ.ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ಪ್ರಕ್ರಿಯೆ ಪುತ್ತೂರು ಪುರಭವನದಲ್ಲಿ ನಡೆಯಲಿದೆ.